'ಪುನೀತ್' ಜವಾಬ್ದಾರಿ ವಿಶಾಲ್ ಹೆಗಲಿಗೆ: 'ಅಪ್ಪು' ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ತಮಿಳು ನಟ !
ಪುನೀತ್ ರಾಜ್ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ಪುನೀತ್ ರಾಜ್ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್ ಘೋಷಣೆ ಮಾಡಿದ್ದಾರೆ.
ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ.
ಪುನೀತ್ ಅವರಿಗೆ ನಮನ ಸಲ್ಲಿಸುತ್ತ ಮಾತನಾಡಿದ ವಿಶಾಲ್ ಈ ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದು ತಿಳಿಸಿದ್ದಾರೆ. ಇಂಥದ್ದೊಂದು ಕಾರ್ಯಕ್ರಮದಲ್ಲಿ ಮಾತನಾಡಬೇಕಾಗುತ್ತದೆ ಎನ್ನುವ ಯಾವ ಅಂದಾಜು ಇರಲಿಲ್ಲ. ಪುನೀತ್ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದು ವಿಶಾಲ್ ಹೇಳಿದರು. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ವಿಶಾಲ್ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ಪುನೀತ್ ರಾಜ್ಕುಮಾರ್ 1800 ಮಕ್ಕಳನ್ನು ಓದಿಸುತ್ತಿದ್ದರು. ಇದೀಗ ಪುನೀತ್ ನಿರ್ವಹಿಸುತ್ತಿದ್ದ ಜವಾಬ್ದಾರಿ ಹೊರುವುದಾಗಿ ವಿಶಾಲ್ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ ಜವಾಬ್ದಾರಿ ನನ್ನದು ಎಂದು ಅವರು ಘೋಷಣೆ ಮಾಡಿದ್ದಾರೆ. ಪುನೀತ್ ರಾಜ್ಕುಮಾರ್ ಸದ್ದಿಲ್ಲದೆ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಕೂಡ ತೊಡಗಿಕೊಂಡಿದ್ದರು ಎಂಬ ವಿಚಾರ ಅವರ ನಿಧನಾನಂತರ ಹೆಚ್ಚು ಹೆಚ್ಚು ಬಯಲಾಗುತ್ತಿದೆ. ಈ ಬಗ್ಗೆ ಪುನೀತ್ ಬಗ್ಗೆ ಅಭಿಮಾನದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


