ಕನ್ನಡಿಗರ ಕಣ್ಮಣಿ ಪುನೀತ್ ಸ್ಮರಣೆ: ಬೆಂಗಳೂರಿನ ಶ್ರೀನಿವಾಸ ಚಿತ್ರಮಂದಿರದಲ್ಲಿ ಇಂದು 'ರಾಜಕುಮಾರ' ಉಚಿತ ಪ್ರದರ್ಶನ
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಶ್ರೀನಿವಾಸ ಚಿತ್ರಮಂದಿರದಲ್ಲಿ ಸೋಮವಾರ ಬೆಳಗ್ಗೆ ಅವರ ಯಶಸ್ವಿ ಚಿತ್ರ 'ರಾಜಕುಮಾರ'ನ ವಿಶೇಷ ಉಚಿತ ಪ್ರದರ್ಶನ ಏರ್ಪಡಿಸಲಾಯಿತು.

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಶ್ರೀನಿವಾಸ ಚಿತ್ರಮಂದಿರದಲ್ಲಿ ಸೋಮವಾರ ಬೆಳಗ್ಗೆ ಅವರ ಯಶಸ್ವಿ ಚಿತ್ರ 'ರಾಜಕುಮಾರ'ನ ವಿಶೇಷ ಉಚಿತ ಪ್ರದರ್ಶನ ಏರ್ಪಡಿಸಲಾಯಿತು.
ಇಂದು ಮುಂಜಾನೆ ಚಿತ್ರಮಂದಿರದಲ್ಲಿ ರಾಜಕುಮಾರ ಚಿತ್ರ ಪ್ರದರ್ಶನವಾಗಿದ್ದು, ಇದು ಸಂಪೂರ್ಣವಾಗಿ ಉಚಿತವಾಗಿತ್ತು. ನೂರಾರು ಮಂದಿ ಪುನೀತ್ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ರಾಜಕುಮಾರ ಪ್ರದರ್ಶನ ಸಂದರ್ಭದಲ್ಲಿ ಅಪ್ಪು ವಿಶೇಷ ವಿಡಿಯೊವನ್ನು ಚಿತ್ರಮಂದಿರಲ್ಲಿ ಬಿಡುಗಡೆ ಮಾಡಲಾಯಿತು. ನಂತರ ಈ ಚಿತ್ರಮಂದಿರದಲ್ಲಿ ಭಜರಂಗಿ 2 ಪ್ರದರ್ಶನ ಕಾಣಲಿದೆ.
ಪುನೀತ್ ರಾಜ್ಕುಮಾರ್ ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವುಗಳಲ್ಲಿ 2017ರಲ್ಲಿ ತೆರೆಗೆ ಬಂದ ಸಂತೋಷ್ ಆನಂದ್ ರಾಮ್ ನಿರ್ದೇಶನದ ಚಿತ್ರ ರಾಜಕುಮಾರ ಕೂಡ ಒಂದು. ಅದರ ಬೊಂಬೆ ಹೇಳುತೈತೆ ಹಾಡು ಅತ್ಯಂತ ಜನಪ್ರಿಯವಾಗಿದ್ದು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಇಷ್ಟಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


