ಸಿನಿಮಾ ಸುದ್ದಿ

ನಟ ಪುನೀತ್ ರಾಜ್ ಕುಮಾರ್ ಸಮಾಧಿ ನೋಡಲು ಅಭಿಮಾನಿಗಳಿಗೆ ಅವಕಾಶ

ದಿವಂಗತ ನಟ ಪುನೀತ್ ರಾಜ್ ಕುಮಾರ್ ಸಮಾಧಿಯ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಕಂಠೀರವ ಸ್ಟುಡಿಯೋದಲ್ಲಿ ಸರ್ಕಾರದ ವತಿಯಿಂದ ಅನುವು ಮಾಡಿಕೊಡಲಾಗಿದೆ.

ನಟ ಪುನೀತ್ ರಾಜ್ ಕುಮಾರ್ ಸಮಾಧಿ ನೋಡಲು ಅಭಿಮಾನಿಗಳಿಗೆ ಅವಕಾಶ
ಪುನೀತ್ ರಾಜ್ ಕುಮಾರ್
Published On :

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಸಮಾಧಿಯ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಕಂಠೀರವ ಸ್ಟುಡಿಯೋದಲ್ಲಿ ಸರ್ಕಾರದ ವತಿಯಿಂದ ಅನುವು ಮಾಡಿಕೊಡಲಾಗಿದೆ.

ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಪ್ಪು ಸಮಾಧಿ ದರ್ಶನ ಪಡೆಯಲು ಸರ್ಕಾರ ಅವಕಾಶ ನೀಡಿದೆ.

ನಿನ್ನೆ ರಾಜ್ ಕುಟುಂಬದಿಂದ ಪುನೀತ್ ರಾಜ್ ಕುಮಾರ್ ಸಮಾಧಿಗೆ ಹಾಲುತುಪ್ಪ ಬಿಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ಸರ್ಕಾರ ಅವಕಾಶ ನೀಡಿದ ಹಿನ್ನೆಲೆಯಲ್ಲಿ ನೆಚ್ಚಿನ ನಟನ ಸಮಾಧಿಯನ್ನು ನೋಡಲು ರಾಜ್ಯ ನಾನಾ ಭಾಗಗಳಿಂದ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋ ಕಡೆ ಆಗಮಿಸುತ್ತಿದ್ದಾರೆ. ಅಭಿಮಾನಿಗಳಿಂದ ನೂಕುನುಗ್ಗಲು ಆಗಬಾರದು ಎಂಬ ಕಾರಣಕ್ಕೆ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.