ಅರ್ಜುನ್ ಸರ್ಜಾ ನಟನೆಯ 'ಒಪ್ಪಂದ' ಸಿನಿಮಾ ಹಾಡುಗಳು ನಾಲ್ಕು ಭಾಷೆಗಳಲ್ಲಿ ರಿಲೀಸ್
ಬಹುಭಾಷಾ ನಟ ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ ಹಾಗೂ ಖ್ಯಾತ ನಟ ಜೆ ಡಿ ಚಕ್ರವರ್ತಿ ಪ್ರಮುಖಪಾತ್ರದಲ್ಲಿ ನಟಿಸಿರುವ "ಒಪ್ಪಂದ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ ಹಾಗೂ ಖ್ಯಾತ ನಟ ಜೆ ಡಿ ಚಕ್ರವರ್ತಿ ಪ್ರಮುಖಪಾತ್ರದಲ್ಲಿ ನಟಿಸಿರುವ "ಒಪ್ಪಂದ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಇದೇ ಸಂದರ್ಭದಲ್ಲಿ ಟ್ರೇಲರ್ ಸಹ ಅನಾವರಣಗೊಂಡಿತು.
ನಿರ್ಮಾಪಕರಾದ ರೆಹಮಾನ, ಕೆ.ಮಂಜು, ಸೆವೆನ್ ರಾಜ್, ಫ್ಯಾಷನ್ ಡಿಸೈನರ್ ರಾಜೇಶ್ ಶೆಟ್ಟಿ, ಭವ್ಯಗೌಡ, ಮೋಹಿನಿ ಚೌಧರಿ ಮುಂತಾದ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.
ಈ ಚಿತ್ರ ಉತ್ತಮವಾಗಿ ಮೂಡಿಬರಲು ಅರ್ಜುನ್ ಸರ್ಜಾ, ಜೆ ಡಿ ಚಕ್ರವರ್ತಿ ಹಾಗೂ ರಾಧಿಕಾ ಕುಮಾರಸ್ವಾಮಿ ಅವರ ಸಹಕಾರ ಬಹಳ ಮುಖ್ಯ. ಅವರೆಲ್ಲರೂ ಚಿತ್ರದಲ್ಲಿ ಅಮೋಘವಾಗಿ ನಟಿಸಿದ್ದಾರೆ. ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಇದೇ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಸಮೀರ್ ತಿಳಿಸಿದರು.
ಅರ್ಜುನ್ ಸರ್ಜಾ ಅವರು ವಿಡಿಯೋ ಮೂಲಕ ಚಿತ್ರತಂಡಕ್ಕೆ ಶುಭಕೋರಿದರು. ಸಮೀರ್ ಅವರೇ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರಕ್ಕೆ ಅಮೀರ್ ಲಾಲ್ ಛಾಯಾಗ್ರಹಣ, ಸುಭಾಷ್ ಆನಂದ್ ಸಂಗೀತ ನಿರ್ದೇಶನ, ರಾಘು ಕುಲಕರ್ಣಿ ಕಲಾ ನಿರ್ದೇಶನ, ಅಮ್ಮ ರಾಜಶೇಖರ್ ನೃತ್ಯ ನಿರ್ದೇಶನ, ಖಾಲಿ ಕಿಕಾಸ್ ಸಾಹಸ ನಿರ್ದೇಶನ ಹಾಗೂ ಪ್ರಭು ಅವರ ಸಂಕಲನವಿದೆ.ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಅಮೀರ್ ಖಾನ್ ಸಹೋದರ ಫೈಸಲ್ ಖಾನ್, ಸೋನಿ ಚರಿಶ್ಟಾ, ವಿಶ್ವನಾಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


