ಅರ್ಜುನ್ ಸರ್ಜಾ- ರಾಧಿಕಾ 'ಒಪ್ಪಂದ': ಹೊಸ ಸಿನಿಮಾ ಹೆಸರು ಬದಲಾವಣೆ
ಈ ಸಿನಿಮಾ ಮೂಲಕ ಬಾಲಿವುಡ್ ನಟ ಫೈಸಲ್ ಖಾನ್ ದಕ್ಷಿಣ ಭಾರತ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಮೀರ್ ಲಾಲ್ ಸಿನಿಮಾಗೆ ಕ್ಯಾಮೆರಾ ಹಿಡಿದಿದ್ದಾರೆ.

ಬೆಂಗಳೂರು: ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ ಮತ್ತು ಜೆ.ಡಿ ಚಕ್ರವರ್ತಿ ನಟನೆಯ ಚಿತ್ರಕ್ಕೆ ಈ ಹಿಂದೆ ಕಾಂಟ್ರಾಕ್ಟ್ (Kontract) ಎಂದು ಹೆಸರಿಡಲಾಗಿತ್ತು. ಅದನ್ನೀಗ ಬದಲಾಯಿಸಲಾಗಿದ್ದು, ಅದೇ ಸಿನಿಮಾಗೆ ಇಟ್ಟಿರುವ ಹೊಸ ಹೆಸರು ಒಪ್ಪಂದ.
ಇದನ್ನೂ ಓದಿ: ಮದುವೆ ಆದ್ಮೇಲೆ ಫಸ್ಟ್ ನೈಟ್ನಲ್ಲಿ ಏನ್ ಮಾಡ್ತೀರಾ? ಅದನ್ನೇ ಈ ಹಾಡಿನಲ್ಲೂ ಮಾಡಿದ್ದೇವೆ: ನಟಿ ರಚಿತಾ ರಾಮ್
ಈ ವಿಷಯವನ್ನು ನಿರ್ಮಾಪಕರು ಬಹಿರಂಗಪಡಿಸಿ, ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆಗೊಳಿಸಿದ್ದಾರೆ. ಈ ಸಿನಿಮಾವನ್ನು ಸಮೀರ್ ನಿರ್ದೇಶಿಸುತ್ತಿದ್ದಾರೆ. ಒಪ್ಪಂದ ಸಿನಿಮಾ ಒಟ್ಟು ನಾಲ್ಕು ಭಾಷೆಗಳಲ್ಲಿ ಬಿಡುಗಡೆ ಕಾಣುತ್ತಿದೆ.
ಸೋನಿ ಚರಿಷ್ತಾ, ವಿಶ್ವನಾಥ್ ಅವರು ತಾರಗಣದಲ್ಲಿದ್ದಾರೆ. ಈ ಸಿನಿಮಾ ಮೂಲಕ ಬಾಲಿವುಡ್ ನಟ ಫೈಸಲ್ ಖಾನ್ ದಕ್ಷಿಣ ಭಾರತ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಮೀರ್ ಲಾಲ್ ಸಿನಿಮಾಗೆ ಕ್ಯಾಮೆರಾ ಹಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


