ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ಜೊತೆ ವಿಜಯ್ ದೇವರಕೊಂಡ 'ಲೈಗರ್' ಸಿನಿಮಾ ಶೂಟಿಂಗ್ ಶುರು
ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್ ಜೊತೆ ನಟಿಸುತ್ತಿರುವುದಕ್ಕೆ ತುಂಬಾ ಎಕ್ಸೈಟ್ ಆಗಿರುವ ವಿಜಯ್ ತಮ್ಮ ಹಾಗೂ ಮೈಕ್ ಜೊತೆಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ.

ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ಲೈಗರ್ ಸಿನಿಮಾ ಶೂಟಿಂಗ್ ಪ್ರಯುಕ್ತ ಅಮೆರಿಕಕ್ಕೆ ತೆರಳಿದ್ದು, ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ಜೊತೆ ಪರದೆ ಹಂಚಿಕೊಳ್ಳಲಿದ್ದಾರೆ.
ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್ ಜೊತೆ ನಟಿಸುತ್ತಿರುವುದಕ್ಕೆ ತುಂಬಾ ಎಕ್ಸೈಟ್ ಆಗಿರುವ ವಿಜಯ್ ತಮ್ಮ ಹಾಗೂ ಮೈಕ್ ಜೊತೆಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್ ನ ಧರ್ಮ ಪ್ರೊಡಕ್ಷನ್ ಲೈಗರ್ ಸಿನಿಮಾ ನಿರ್ಮಿಸುತ್ತಿದೆ. ಸಿನಿಮಾದಲ್ಲಿ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ಇದನ್ನೂ ಓದಿ: ಕೆಜಿಎಫ್ ಸಕ್ಸಸ್ ಬಳಿಕ ಬ್ಯಾಕ್ ಟು ಬ್ಯಾಕ್ ಬಾಲಿವುಡ್ ಚಿತ್ರಗಳಲ್ಲಿ ರವಿ ಬಸ್ರೂರ್; ಯುಧ್ರಾ ಬೆನ್ನಲ್ಲೇ ಇದೀಗ 'ಗರುಡ್'!
20ನೇ ವಯಸ್ಸಿನಲ್ಲೇ ಬಾಕ್ಸಿಂಗ್ ಹೆವಿವೇಯ್ಟ್ ಚಾಂಪಿಯನ್ ಶಿಪ್ ಗೆದ್ದ ಮೈಕ್ ಟೈಸನ್ ಸಾರ್ವಕಾಲಿಕ ಶ್ರೇಷ್ಠ ಬಾಕ್ಸರ್ ಎಂದೇ ಪ್ರಖ್ಯಾತಿ ಪಡೆದಿದ್ದಾರೆ. ಆತ ತೆಲುಗು ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಲೈಗರ್ ಸಿನಿಮಾ 5 ಭಾಷೆಗಳಲ್ಲಿ ತೆರ ಕಾಣಲಿದ್ದು, ಸೆಪ್ಟೆಂಬರ್ ವೇಳೆಗೆ ಸಿನಿಮಾ ಬಿಡುಗಡೆಗೊಳ್ಳಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಪುರಿ ಜಗನ್ನಾಥ್ ಅವರು ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
Related Article
ಶ್ರೀಮುರುಳಿ ನಟನೆಯ 'ಮದಗಜ' ಸಿನಿಮಾ 1,500 ಸ್ಕ್ರೀನ್ ಗಳಲ್ಲಿ ಪ್ರದರ್ಶನ
ಮಕ್ಕಳ ದಿನಾಚರಣೆ: ಅಪ್ಪು ಬಾಲ್ಯ ಸ್ಮರಿಸಿದ ನಟ ರಾಘವೇಂದ್ರ ರಾಜ್‌ಕುಮಾರ್
ಐಎಂಡಿಬಿ ಪಟ್ಟಿಯಲ್ಲಿ 'ಶಾವ್ಶಾಂಕ್ ರಿಡೆಂಪ್ಶನ್' ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ 'ಜೈಭೀಮ್'
ತನಗಿಂತ ಕಿರಿಯರ ಜೊತೆ ಡೇಟಿಂಗ್ ವಿಚಾರ: ಪ್ರೇಮಕ್ಕೂ ವಯಸ್ಸಿಗೂ ಸಂಬಂಧವಿಲ್ಲ; ಅದು ಸಮಸ್ಯೆಯೇ ಅಲ್ಲ ಎಂದ ನಟಿ ರಶ್ಮಿಕಾ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


