ಶಿವರಾಜ್ ಕುಮಾರ್ 125 ನೇ ಸಿನಿಮಾ "ವೇದ"ದಲ್ಲಿ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಪ್ರಮುಖ ಪಾತ್ರ
ಶಿವರಾಜ್ ಕುಮಾರ್ ಅವರ 125 ನೇ ಸಿನಿಮಾ "ವೇದ"ಗೆ ಸರಳ ಕಾರ್ಯಕ್ರಮವೊಂದರಲ್ಲಿ ಚಾಲನೆ ನೀಡಲಾಗಿದೆ.

ಶಿವರಾಜ್ ಕುಮಾರ್ ಅವರ 125 ನೇ ಸಿನಿಮಾ "ವೇದ"ಗೆ ಸರಳ ಕಾರ್ಯಕ್ರಮವೊಂದರಲ್ಲಿ ಚಾಲನೆ ನೀಡಲಾಗಿದೆ. ಎ ಹರ್ಷ ನಿರ್ದೇಶನದ ಸಿನಿಮಾ ಇದಾಗಿದ್ದು, ಡಿಸೆಂಬರ್ ನಿಂದ ಚಿತ್ರೀಕರಣ ಪ್ರಾರಂಭ ಮಾಡುವ ಯೋಜನೆ ಇದೆ. ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ ಬೃಹತ್ ಸೆಟ್ ನಲ್ಲಿ ಮೊದಲ ಶೆಡ್ಯೂಲ್ ಚಿತ್ರೀಕರಣ ನಡೆಯಲಿದೆ.
ನಿರ್ದೇಶಕ ತಾರಾಗಣದ ಆಯ್ಕೆಯನ್ನು ಅಂತಿಮಗೊಳಿಸುತ್ತಿದ್ದು, ಸಿನಿಮಾ ಎಕ್ಸ್ ಪ್ರೆಸ್ ಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಶಿವರಾಜ್ ಕುಮಾರ್ ನಟನೆಯ ಸಿನಿಮಾದ ಮೂಲಕ ಗಾಯಕಿ ಅದಿತಿ ಸಾಗರ್ ನಟನೆಗೆ ಪ್ರವೇಶಿಸುತ್ತಿದ್ದಾರೆ. ನಟ-ಕಲಾ ನಿರ್ದೇಶಕ ಅರುಣ್ ಸಾಗರ್ ಅವರ ಪುತ್ರಿಯಾಗಿರುವ ಅದಿತಿ ಸಾಗರ್, ರ್ಯಾಂಬೋ 2 ನ ದಮ್ ಮಾರೋ ದಮ್ ಮೂಲಕ ಗಾಯನ ಕ್ಷೇತ್ರಕ್ಕೆ ಪ್ರವೇಶಿಸಿದ್ದರು. ಅದಿತಿ ಸಾಗರ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶೀಘ್ರವೇ ವಿವರಗಳು ಬಹಿರಂಗಗೊಳ್ಳಲಿವೆ.
ಶಿವರಾಜ್ ಕುಮಾರ್ ಬೈರಾಗಿ ಹಾಗೂ ನೀ ಸಿಗುವವರೆಗೂ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ಗೀತಾ ಪಿಕ್ಚರ್ಸ್ ನ ಹೋಮ್ ಪ್ರೊಡಕ್ಷನ್ ನ ಮೊದಲ ನಿರ್ಮಾಣದ ಚಿತ್ರವಾಗಿರಲಿದೆ ವೇದ ಸಿನಿಮಾ.
ವೇದ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಜೆ ಸ್ವಾಮಿ ಸಿನಿಮೆಟೋಗ್ರಾಫಿ, ದೀಪು ಎಸ್ ಕುಮಾರ್ ಸಂಕಲನ ಇರಲಿದೆ. ಭಜರಂಗಿ-2 ಸಿನಿಮಾ ನಿರ್ದೇಶನ ಮಾಡಿದ್ದ ಹರ್ಷ ವೇದಾ ಸಿನಿಮಾಗೂ ನಿರ್ದೇಶಕರಾಗಿದ್ದಾರೆ. ವಜ್ರಕಾಯ, ಭಜರಂಗಿ, ಭಜರಂಗಿ-2 ಸಿನಿಮಾಗಳ ನಂತರ ಹರ್ಷ ನಿರ್ದೇಶನದ್ಲಲಿ ಶಿವರಾಜ್ ಕುಮಾರ್ ನಟಿಸುತ್ತಿರುವ 4 ನೇ ಸಿನಿಮಾ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


