ಸಿನಿಮಾ ಸುದ್ದಿ

'ಭಾವಚಿತ್ರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಗಾನವಿ ಲಕ್ಷ್ಮಣ್, ಚಕ್ರವರ್ತಿ

‘ಹೀರೋ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಗಾನವಿ ಲಕ್ಷ್ಮಣ್ ಅವರು ಭಾವಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

'ಭಾವಚಿತ್ರ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಗಾನವಿ ಲಕ್ಷ್ಮಣ್, ಚಕ್ರವರ್ತಿ
ಚಕ್ರವರ್ತಿ
Published On :

ಬೆಂಗಳೂರು: ‘ಹೀರೋ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಗಾನವಿ ಲಕ್ಷ್ಮಣ್ ಅವರು ಭಾವಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಭಾವಚಿತ್ರವು 'ಟೆಕ್ನೋ-ಥ್ರಿಲ್ಲರ್' ಆಗಿದ್ದು. ಗಿರೀಶ್ ಕುಮಾರ್ ಬಿ ನಿರ್ದೇಶನದ ಎರಡನೇ ಚಿತ್ರದಲ್ಲಿ ನಾಯಕರಾಗಿ ಚಕ್ರವರ್ತಿ ಕಾಣಿಸಿಕೊಂಡಿದ್ದಾರೆ.

ನಿರ್ಮಾಪಕರು ಈಗಾಗಲೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಇತ್ತೀಚೆಗೆ ಟ್ರೇಲರ್ ಕೂಡ ಬಿಡುಗಡೆ ಮಾಡಿದ್ದಾರೆ.

ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ವಾರ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆಯುವ ಪ್ರಯತ್ನದಲ್ಲಿದೆ.

ನಿರ್ಮಾಪಕರು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಿದ್ದು, ಚಿತ್ರದ ಹಾಡುಗಳಿಗೆ ಗೌತಮ್ ಶ್ರೀವತ್ಸ ಸಂಗೀತ ಸಂಯೋಜಿಸಿದ್ದಾರೆ. ಶಂಕರ್, ವಿನಾಯಕ ನಾಡಕರ್ಣಿ, ಸಚಿನ್, ರತೀಶ್ ಕುಮಾರ್ ಈ ಸಿನಿಮಾ ಬಂಡವಾಳ ಹೂಡಿದ್ದಾರೆ. ನಿರ್ಮಾಣದ ಜೊತೆಗೆ ಸಂಕಲನವನ್ನೂ ಮಾಡಿದ್ದಾರೆ. ರತೀಶ್ ಕುಮಾರ್. ಅಜಯ್ ಕುಮಾರ್ ಅವರು ಛಾಯಾಗ್ರಹಣ ಮಾಡಿದ್ದರೆ, ಗಿರೀಶ್ ಬಿಜ್ಜಳ್ ಹಾಗೂ ಗಿರೀಶ್ ಬುಜ್ಜಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಚಿತ್ರಕ್ಕೆ ಗೌತಮ್ ಶ್ರೀವತ್ಸ ಸಂಗೀತ, ನಿರ್ದೇಶಕರ ಸಹೋದರ ರತೀಶ್ ಕುಮಾರ್ ಸಂಕಲನ, ಅಜಯ್ ಕುಮಾರ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.