ಕಿರುತೆರೆಯಿಂದ ಬೆಳ್ಳಿತೆರೆಗೆ ಅಮೃತವರ್ಷಿಣಿ ಧಾರಾವಾಹಿ ನಟಿ ರಜಿನಿ ಹೈಜಂಪ್: 'ಅಂಬುಜಾ' ಹಾರರ್ ಥ್ರಿಲ್ಲರ್ ಸಿನಿಮಾದಲ್ಲಿ ನಟನೆ
ರಜಿನಿ, 'ಅಂಬುಜಾ' ಎನ್ನುವ ನೈಜ ಘಟನೆಯಾಧಾರಿತ ನಾಯಕಿ ಪ್ರಧಾನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶ್ರೀನಿ ಹನುಮಂತರಾಜು ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಕಿರುತೆರೆಯಲ್ಲಿ ಹೆಸರು ಮಾಡಿ ಈಗ ಬೆಳ್ಳಿಪರದೆಯಲ್ಲಿ ತಮ್ಮ ಅದೃಷ್ಟಪರೀಕ್ಷೆಗೆ ಮುಂದಾಗಿರುವವರ ಸಾಲಿಗೆ ಧಾರಾವಾಹಿ ನಟಿ ರಜಿನಿ ಸೇರ್ಪಡೆಗೊಂಡಿದ್ದಾರೆ.
ಅಮೃತವರ್ಷಿಣಿ ಧಾರಾವಾಹಿಯಿಂದ ಜನಪ್ರಿಯತೆ ಪಡೆದುಕೊಂಡಿರುವ ರಜಿನಿ, 'ಅಂಬುಜಾ' ಎನ್ನುವ ನೈಜ ಘಟನೆಯಾಧಾರಿತ ನಾಯಕಿ ಪ್ರಧಾನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶ್ರೀನಿ ಹನುಮಂತರಾಜು ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಹಾರರ್- ಥ್ರಿಲ್ಲರ್ ಸಿನಿಮಾ ಆಗಿರುವ 'ಅಂಬುಜಾ'ದಲ್ಲಿ ರಜಿನಿ ಅವರು ನಟಿ ಶುಭಾ ಪೂಂಜಾ ಜೊತೆ ಪರದೆ ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗಿ ಪ್ರಸನ್ನ ಕುಮಾರ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಮುರಳೀಧರ್ ಅವರು ಸಿನಿಮೆಟೊಗ್ರಫಿ ಹೊಣೆ ನಿರ್ವಹಿಸುತ್ತಿದ್ದಾರೆ. ಸಿನಿಮಾದಲ್ಲಿ ಪದ್ಮಜಾ ರಾವ್, ಗೋವಿಂದ ಗೌಡ, ದೀಪಕ್ ಸುಬ್ರಮಣ್ಯ ಮತ್ತು ಸಂದೇಶ್ ಶೆಟ್ಟಿ ತಾರಾಗಣದಲ್ಲಿದ್ದಾರೆ.
ಇದನ್ನೂ ಓದಿ: ಸಿನಿಮಾ ವಿತರಣೆಗೂ 'ಡಿ ಬೀಟ್ಸ್' ಆಡಿಯೋ ಸಂಸ್ಥೆ ಮುಂದು!
Related Article
ರಂಗಿತರಂಗ ಹಿಂದಿ ರಿಮೇಕ್ ಹಕ್ಕುಗಳ ಮಾರಾಟ ಸುದ್ದಿ ಅಲ್ಲಗಳೆದ ನಿರ್ಮಾಪಕ
'ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್ ಗೂ ಸಿಕ್ಕಿದಂತೆ, ಅಷ್ಟೇ ಸಂತೋಷವಾಗಿದೆ': ಸುಮಲತಾ ಅಂಬರೀಷ್
ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸುವ ಆಸೆ ಮುಂಚಿನಿಂದಲೂ ಇತ್ತು: ಸಕತ್ ನಾಯಕಿ ನಿಶ್ವಿಕಾ ನಾಯ್ಡು
'ಶ್ರೀ ಜಗನ್ನಾಥ ದಾಸರು' ಮುಂದಿನ ತಿಂಗಳು ರಾಜ್ಯಾದ್ಯಂತ ಬಿಡುಗಡೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


