ಸಿನಿಮಾ ಸುದ್ದಿ

ತಮಿಳು ಬಿಗ್​ ಬಾಸ್​ ನಿರೂಪಕರ ಬದಲಾವಣೆ: ಕಮಲ್ ಹಾಸನ್ ಬದಲು ನಟಿ ರಮ್ಯಾ ಕೃಷ್ಣ​

ಕಿರುತೆರೆ ಪ್ರೇಕ್ಷಕರಿಗೆ ಬಿಗ್​ ಬಾಸ್ ರಿಯಾಲಿಟಿ ಶೋ ಬಗ್ಗೆ ಸಖತ್​ ಕ್ರೇಜ್​. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಕಾರ್ಯಕ್ರಮ ಫೇಮಸ್​ ಆಗಿದೆ.

ತಮಿಳು ಬಿಗ್​ ಬಾಸ್​ ನಿರೂಪಕರ ಬದಲಾವಣೆ: ಕಮಲ್ ಹಾಸನ್ ಬದಲು ನಟಿ ರಮ್ಯಾ ಕೃಷ್ಣ​
ರಮ್ಯಾ ಕೃಷ್ಣನ್
Published On :

ಕಿರುತೆರೆ ಪ್ರೇಕ್ಷಕರಿಗೆ ಬಿಗ್​ ಬಾಸ್ ರಿಯಾಲಿಟಿ ಶೋ ಬಗ್ಗೆ ಸಖತ್​ ಕ್ರೇಜ್​. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ಕಾರ್ಯಕ್ರಮ ಫೇಮಸ್​ ಆಗಿದೆ.

ಕನ್ನಡದಲ್ಲಿ ಕಿಚ್ಚ ಸುದೀಪ್​  ಹಿಂದಿಯಲ್ಲಿ ಸಲ್ಮಾನ್​ ಖಾನ್​ ಅವರು ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದ್ದಾರೆ. ಆದರೆ ತೆಲುಗು ಮತ್ತು ತಮಿಳಿನಲ್ಲಿ ಬದಲಾವಣೆಗಳು ಆಗುತ್ತಿವೆ. ತಮಿಳು ಬಿಗ್​ ಬಾಸ್​ 5  ನಿರೂಪಣೆ ಮಾಡುತ್ತಿದ್ದ ಕಮಲ್​ ಹಾಸನ್​  ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಈಗ ನಟಿ ರಮ್ಯಾ ಕೃಷ್ಣ ಆಗಮಿಸಿದ್ದಾರೆ ಎಂಬ ಸುದ್ದಿ ಹಬ್ಬಿದೆ.​

ಕಮಲ್​ ಹಾಸನ್​ ಅವರಿಗೆ ಕೊವಿಡ್​ ಸೋಂಕು ತಗುಲಿರುವುದು ಕೆಲವೇ ದಿನಗಳ ಹಿಂದೆ ಖಚಿತಗೊಂಡಿತು. ಸದ್ಯ ಅವರು ಬಿಗ್​ ಬಾಸ್​ ಕಾರ್ಯಕ್ರಮದ ನಿರೂಪಣೆಗೆ ಬ್ರೇಕ್​ ನೀಡಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ನಿರೂಪಣೆಯ ಜಬಾವ್ದಾರಿಯನ್ನು ಯಾರು ಹೊತ್ತುಕೊಳ್ಳುತ್ತಾರೆ ಎಂಬ ಪ್ರಶ್ನೆ ಮೂಡಿತು. ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್​ ಅವರಿಗೆ ಈ ಕೆಲಸ ವಹಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಹರಡಿತ್ತು. ಆದರೆ ಅದು ನಿಜವಾಗಿಲ್ಲ. ಸದ್ಯ ಬಹುಭಾಷಾ ಕಲಾವಿದೆ ರಮ್ಯಾ ಕೃಷ್ಣ ಹೆಸರು ಕೇಳಿಬರುತ್ತಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿರುವ ರಮ್ಯಾ ಕೃಷ್ಣ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಿರುತೆರೆಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕೆಲವು ಕಾರ್ಯಕ್ರಮಗಳಿಗೆ ನಿರೂಪಕಿಯಾಗಿ, ಜಡ್ಜ್​ ಆಗಿ ಕೆಲಸ ಮಾಡಿದ ಅನುಭವವೂ ಅವರಿಗೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.