ಸಿನಿಮಾ ಸುದ್ದಿ

ನಟ ನೀನಾಸಂ ಸತೀಶ್​ ಅವರಿಗೆ ಮಾತೃ ವಿಯೋಗ

ಸ್ಯಾಂಡಲ್​ವುಡ್ ನಟ ನೀನಾಸಂ ಸತೀಶ್ ಅವರ ತಾಯಿ ಚಿಕ್ಕತಾಯಮ್ಮ ಅವರು ಶುಕ್ರವಾರ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ನಟ ನೀನಾಸಂ ಸತೀಶ್​ ಅವರಿಗೆ ಮಾತೃ ವಿಯೋಗ
ತಾಯಿ ಜೊತೆಗಿರುವ ನಟ ನೀನಾಸಂ ಸತೀಶ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಸ್ಯಾಂಡಲ್​ವುಡ್ ನಟ ನೀನಾಸಂ ಸತೀಶ್ ಅವರ ತಾಯಿ ಚಿಕ್ಕತಾಯಮ್ಮ ಅವರು ಶುಕ್ರವಾರ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 80 ವರ್ಷ ವಯಸ್ಸಾಗಿತ್ತು. ಆರ್​.ಆರ್​.ನಗರದಲ್ಲಿರುವ ನಿವಾಸದಲ್ಲಿ ಇಂದು ಮುಂಜಾನೆ ನಿಧನ ಹೊಂದಿದ್ದಾರೆಂದು ತಿಳಿದುಬಂದಿದೆ. 

ಹಲವಾರು ವರ್ಷಗಳಿಂದ ಸತೀಶ್ ನೀನಾಸಂ, ತಮ್ಮ ತಾಯಿ‌ಯನ್ನು ಆರ್.ಆರ್ ನಗರದಲ್ಲಿರುವ ನಿವಾಸದಲ್ಲಿ ನೋಡಿಕೊಳ್ಳುತ್ತಿದ್ದರು. 

ಮಂಡ್ಯದ ಹತ್ತಿರ ಯಲ್ಲದುಹಳ್ಳಿಯಲ್ಲಿ ತಾಯಿಯ ಅಂತ್ಯ ಸಂಸ್ಕಾರ ನೆರವೇರಿಸಲು ತೀರ್ಮಾನಿಸಲಾಗಿದೆ ಸತೀಶ್ ಅವರ ಆಪ್ತರು ಮಾಹಿತಿ ನೀಡಿದ್ದಾರೆ. 

ಚಿಕ್ಕ ತಾಯಮ್ಮರ ಅಗಲಿಕೆಗೆ, ನೀನಾಸಂ ಅವರ ಸ್ನೇಹಿತರು ಹಾಗೂ ಸಿನಿಮಾರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.