'ಶಬರಿ ಸರ್ಚಿಂಗ್ ಫಾರ್ ರಾವಣ' ಪೋಸ್ಟರ್ ರಿವೀಲ್: ಹೊಸ ಗೆಟಪ್ ನಲ್ಲಿ ಗುಳಿಕೆನ್ನೆ ಬೆಡಗಿ ರಚಿತಾ ರಾಮ್!
ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜನ್ಮದಿನದ ಹಿನ್ನೆಲೆಯಲ್ಲಿ ಶಬರಿ ಸೆರ್ಚಿಂಗ್ ಫಾರ್ ರಾವಣ ಚಿತ್ರತಂಡ ಸಿನಿಮಾದ ಪೋಸ್ಟರ್ ರಿವೀಲ್ ಮಾಡಿದೆ.

ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜನ್ಮದಿನದ ಹಿನ್ನೆಲೆಯಲ್ಲಿ ಶಬರಿ ಸರ್ಚಿಂಗ್ ಫಾರ್ ರಾವಣ ಚಿತ್ರತಂಡ ಸಿನಿಮಾದ ಪೋಸ್ಟರ್ ರಿವೀಲ್ ಮಾಡಿದೆ.
ಶಬರಿ ತಂಡ ರಿಲೀಸ್ ಮಾಡಿರುವ ಪೋಸ್ಟರ್ ನಲ್ಲಿ ರಚಿತಾ ಹೊಸಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಚಿತಾ ಮೊದಲ ಬಾರಿಗೆ ಶಾರ್ಟ್ ಹೇರ್ ಕಟ್ ನಲ್ಲಿ ಕಾಣಿಸಿಕೊಂಡಿದ್ದಾರೆ, ಸಿನಿಮಾದಲ್ಲಿ ಆಫೀಸರ್ ಪಾತ್ರದಲ್ಲಿ ರಚಿತಾ ನಟಿಸುತ್ತಿದ್ದಾರೆ.
ಪೋಸ್ಟರ್ನಲ್ಲಿ ಅಭಿಮಾನಿಗಳಿಗೆ ಬಹುದೊಡ್ಡ ಅಚ್ಚರಿ ಎದುರಾಗಿದೆ. ಕಾರಣ, ರಚಿತಾ ಇದುವರೆಗೂ ಕಾಣಿಸಿಕೊಳ್ಳದ ಗೆಟಪ್ನಲ್ಲಿ ಮಿಂಚುತ್ತಿದ್ದಾರೆ. ಸಣ್ಣ ಕೂದಲಿನ ಮಾಸ್ ಲುಕ್ನಲ್ಲಿದ್ದು, ಅವರ ಟೇಬಲ್ನಲ್ಲಿ ಒಂದು ಮುದ್ದಾದ ಬೆಕ್ಕೂ ಇದೆ. ಆಫೀಸರ್ ಲುಕ್ನಲ್ಲಿ ರಚಿತಾ ಕುಳಿತಿರುವುದು ಅವರ ಇದುವರೆಗಿನ ಚಿತ್ರಗಳಿಂದ ಇದು ಕಂಪ್ಲೀಟ್ ಡಿಫರೆಂಟ್ ಎನ್ನುವುದನ್ನು ಒತ್ತಿ ಹೇಳುತ್ತಿದೆ.
'ಶಬರಿ ಸರ್ಚಿಂಗ್ ಫಾರ್ ರಾವಣ' ಚಿತ್ರವನ್ನು ನವೀನ್ ಶೆಟ್ಟಿ ನಿರ್ದೇಶಿಸುತ್ತಿದ್ದು, ರಿವೆಂಜ್ ಥ್ರಿಲ್ಲರ್ ಮಾದರಿಯ ಕಥಾನಕ ಹೊಂದಿರಲಿದೆ. ಅನೂಪ್ ಸೀಳಿನ್ ಸಂಗೀತ ನೀಡಲಿದ್ದು, ವಿಶಾಲ್ ಕುಮಾರ್ ಗೌಡ ಛಾಯಾಗ್ರಹಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಚಿತಾ ಎರಡು ಶೇಡ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ರಘು ಮುಖರ್ಜಿ, ಅರ್ಚನಾ ಕೊಟ್ಟಿಗೆ ಮೊದಲಾದವರು ಬಣ್ಣ ಹಚ್ಚುತ್ತಿದ್ದಾರೆ.
ಆಗಸ್ಟ್ ನಲ್ಲಿ ಶೂಟಿಂಗ್ ಆರಂಭಿಸಿದ್ದ ಚಿತ್ರತಂಡ ಮೈಸೂರಿನಲ್ಲಿ ಕೆಲ ದಿನಗಳ ಕಾಲ ಚಿತ್ರೀಕರಣ ಆರಂಭಿಸಿತ್ತು, ಸದ್ಯ ದಸರಾ ನಂತರ ಮತ್ತೆ ಶೂಟಿಂಗ್ ಆರಂಭವಾಗಲಿದೆ. ರಚಿತಾ ರಾಮ್ ಕೈಯ್ಯಲ್ಲಿ ಹಲವು ಸಿನಿಮಾಗಳಿದ್ದು, 100 ಸಿನಿಮಾ ರಿಲೀಸ್ ಗಾಗಿ ಕಾಯುತ್ತಿದ್ದಾರೆ, ಇದರ ಜೊತೆಗೆ ವೀರಂ, ಲವ್ ಯೂ ರಚ್ಚು ಸಿನಿಮಾಗಳಲ್ಲಿಯೂ ಅಭಿನಯಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


