ಸಿನಿಮಾ ಸುದ್ದಿ

ಕರ್ನಾಟಕದ ಶಿಲ್ಪಾ, ರಶ್ಮಿ, ಸುಪ್ರೀತಾ, ಕಾವ್ಯಾಗೆ ಮಿಸೆಸ್ ಇಂಡಿಯಾ ಕಿರೀಟ

ರಾಜಸ್ತಾನದ ಜೈಪುರದಲ್ಲಿ ನಡೆದ ಮಿಸೆಸ್ ಇಂಡಿಯಾ ಐ ಆಮ್ ಪವರ್‍ಫುಲ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಿಲ್ಪಾ ಸುಧಾಕರ್, ರಶ್ಮಿ ರಂಗಪ್ಪ, ಸುಪ್ರೀತಾ ಹಾಗೂ ಕಾವ್ಯ ಪ್ರಶಸ್ತಿ ಗೆದ್ದುಕೊಂಡರು.

ಕರ್ನಾಟಕದ ಶಿಲ್ಪಾ, ರಶ್ಮಿ, ಸುಪ್ರೀತಾ, ಕಾವ್ಯಾಗೆ ಮಿಸೆಸ್ ಇಂಡಿಯಾ ಕಿರೀಟ
ಮಿಸೆಸ್ ಇಂಡಿಯಾ
Published On :

ಜೈಪುರ: ರಾಜಸ್ತಾನದ ಜೈಪುರದಲ್ಲಿ ನಡೆದ ಮಿಸೆಸ್ ಇಂಡಿಯಾ ಐ ಆಮ್ ಪವರ್‍ಫುಲ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಿಲ್ಪಾ ಸುಧಾಕರ್, ರಶ್ಮಿ ರಂಗಪ್ಪ, ಸುಪ್ರೀತಾ ಹಾಗೂ ಕಾವ್ಯ ಪ್ರಶಸ್ತಿ ಗೆದ್ದುಕೊಂಡರು.

ಮಿಸೆಸ್ ಇಂಡಿಯಾ ಐ ಆಮ್ ಪವರ್ ಫುಲ್ ಯೂನಿವರ್ಸ್ ವಿಭಾಗದ ಕಿರೀಟವನ್ನು ಶಿಲ್ಪಾ ಗೆದ್ದುಕೊಂಡರೆ, ಐ ಆಮ್ ಪವರ್ ಫುಲ್ ವಲ್ರ್ಡ್ ವಿಭಾಗದಲ್ಲಿ ರಶ್ಮಿ, ಏಷ್ಯಾ ವಿಭಾಗದಲ್ಲಿ ಸುಪ್ರೀತಾ, ಕರ್ವಿ ವಲ್ರ್ಡ್ ವಿಭಾಗದಲ್ಲಿ ಕಾವ್ಯ ಕಿರೀಟ ಜಯಿಸಿದರು. ಅಂತೆಯೇ ನಿರ್ಮಲಾ, ಹೇಮಾ, ಸ್ನೇಹ, ಸಿಂಧು ರನ್ನರ್ ಅಪ್ ಆದರು.

Story image

ನಂದಿನಿ ನಾಗರಾಜ್ ಹಾಗೂ ಜಸ್ಪ್ರೀತ್ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ 10 ರೂಪದರ್ಶಿಯರ ತಂಡ ಜೈಪುರಕ್ಕೆ ತೆರಳಿತ್ತು. ಒಟ್ಟು 40 ಸ್ಪರ್ಧಿಗಳು ಭಾಗವಹಿಸಿದ್ದರು.

ವಿಂಟೇಜ್, ಗೌನ್, ಎಥ್‍ನಿಕ್, ಟ್ಯಾಲೆಂಟ್ ಸುತ್ತುಗಳಲ್ಲಿ ರೂಪದರ್ಶಿಯರು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು.

"ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದಿದ್ದ ರೂಪದರ್ಶಿಯರು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು. ತೆಳ್ಳಗೆ, ಬೆಳ್ಳಗೆ ಇರುವವರು, ಎತ್ತರ, ದಪ್ಪ, ವಯಸ್ಸನ್ನು ನೋಡಿ ಈ ಸ್ಪರ್ಧೆಗೆ ಆಯ್ಕೆ ಮಾಡಲಾಗಿಲ್ಲ. ಬದಲಾಗಿ ಅವರಿಗೆ ಇರುವ ಅರ್ಹತೆ ಹಾಗೂ ಆತ್ಮವಿಶ್ವಾಸವೇ ನಮ್ಮ ಸ್ಪರ್ಧೆಯ ಮಾನದಂಡವಾಗಿತ್ತು' ಎಂದು ಆಯೋಜಕಿ ನಂದಿನಿ ನಾಗರಾಜ್ ಹೇಳಿದರು.

ಬೆಂಗಳೂರಿನ ತಂಡ ಜೈಪುರದಲ್ಲಿ ಒಟ್ಟು ನಾಲ್ಕು ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಈ ತಂಡ ಮುಂದಿನ ವರ್ಷ ಸಿಂಗಪುರದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.