ರಾಮಾಯಣ ಧಾರಾವಾಹಿಯ 'ರಾವಣ' ಪಾತ್ರಧಾರಿ ಅರವಿಂದ ತ್ರಿವೇದಿ ವಿಧಿವಶ
ರಮಾನಂದ ಸಾಗರ್ ಅವರ ಜನಪ್ರಿಯ 'ರಾಮಾಯಣ' ಧಾರಾವಾಹಿಯಲ್ಲಿ ರಾವಣ ಪಾತ್ರ ನಿರ್ವಹಿಸಿದ್ದ ನಟ ಅರವಿಂದ ತ್ರಿವೇದಿ (82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಮುಂಬೈ: ರಮಾನಂದ ಸಾಗರ್ ಅವರ ಜನಪ್ರಿಯ 'ರಾಮಾಯಣ' ಧಾರಾವಾಹಿಯಲ್ಲಿ ರಾವಣ ಪಾತ್ರ ನಿರ್ವಹಿಸಿದ್ದ ನಟ ಅರವಿಂದ ತ್ರಿವೇದಿ (82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ
ಅರವಿಂದ ತ್ರಿವೇದಿ ಅವರು ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಹೃದಯಾಘಾತ, ಬಹು ಅಂಗಾಂಗ ವೈಫಲ್ಯದ ಕಾರಣಗಳಿಂದಾಗಿ ಅವರು ಸಾವಿಗೀಡಾದರು.
ಗುಜರಾತಿ ಸಿನಿಮಾಗಳಲ್ಲಿ 40 ವರ್ಷಗಳ ನಟನೆಯ ಸುದೀರ್ಘ ಪ್ರಯಾಣದಲ್ಲಿ ಹಲವು ಚಿತ್ರಗಳು ಜನಪ್ರಿಯತೆ ಪಡೆದಿವೆ. ಹಿಂದಿ ಮತ್ತು ಗುಜರಾತಿಯ ಸಾಮಾಜಿಕ, ಪೌರಾಣಿಕ ಕಥೆಯಾಧಾರಿತ ಸುಮಾರು 300 ಸಿನಿಮಾಗಳಲ್ಲಿ ಅರವಿಂದ ಅಭಿನಯಿಸಿದ್ದಾರೆ. ರಾಮಾಯಣ ಧಾರಾವಾಹಿಯ 'ರಾವಣ' ಪಾತ್ರ ರಾಷ್ಟ್ರಮಟ್ಟದಲ್ಲಿ ಅವರನ್ನು ಗುರುತಿಸುವಂತೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


