ಸಿನಿಮಾ ಸುದ್ದಿ

ರಾಷ್ಟ್ರ ಪ್ರಶಸ್ತಿ ವಿಜೇತ ನಟ ನೆಡುಮುಡಿ ವೇಣು ನಿಧನ

500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಅಭಿನಯಿಸಿದ್ದ ಮತ್ತು ಎರಡು ಬಾರಿ ರಾಷ್ಟ್ರ ಪ್ರಶಸ್ತಿ, ಅರ್ಧ ಡಜನ್‌ಗಿಂತಲೂ ಹೆಚ್ಚು ಕೇರಳ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದ ಪ್ರತಿಭಾನ್ವಿತ ಹಿರಿಯ ನಟ ನೆಡುಮುಡಿ ವೇಣು...

ರಾಷ್ಟ್ರ ಪ್ರಶಸ್ತಿ ವಿಜೇತ ನಟ ನೆಡುಮುಡಿ ವೇಣು ನಿಧನ
ನೆಡುಮುಡಿ ವೇಣು
Published On :

ತಿರುವನಂತಪುರಂ: 500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಅಭಿನಯಿಸಿದ್ದ ಮತ್ತು ಎರಡು ಬಾರಿ ರಾಷ್ಟ್ರ ಪ್ರಶಸ್ತಿ, ಅರ್ಧ ಡಜನ್‌ಗಿಂತಲೂ ಹೆಚ್ಚು ಕೇರಳ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದ ಪ್ರತಿಭಾನ್ವಿತ ಹಿರಿಯ ನಟ ನೆಡುಮುಡಿ ವೇಣು(73) ಅವರು ಸೋಮವಾರ ನಿಧನರಾಗಿದ್ದಾರೆ.

ಕೋವಿಡ್ -19 ರಿಂದ ಚೇತರಿಸಿಕೊಂಡ ನಂತರ ಲಿವರ್ ಸಮಸ್ಸೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದ 73 ವರ್ಷದ ವೇಣು ಅವರು ಚಿಕಿತ್ಸೆ ಪಲಕಾರಿಯಾಗಿದೇ ಇಂದು ಮಧ್ಯಾಹ್ನದ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಅಲಪುಳದ ನೆಡುಮುಡಿಯಲ್ಲಿ ಪಿ ಕೆ ಕೇಶವನ್ ಪಿಳ್ಳೈ ಮತ್ತು ಪಿ ಕುಂಜಿಕುಟ್ಟಿಯಮ್ಮ ದಂಪತಿಗೆ ಜನಿಸಿದ ಐದು ಮಕ್ಕಳಲ್ಲಿ ಒಬ್ಬರಾದ ವೇಣು 1978 ರಲ್ಲಿ ಜಿ ಅರವಿಂದನ್ ನಿರ್ದೇಶನದ 'ಥಂಪು' ಚಿತ್ರದ ಮೂಲಕ ನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ನೆಡುಮುಡಿ ವೇಣು ಅವರು 'ಕವಾಲಂ ನಾರಾಯಣ ಪಣಿಕೆರ್' ನಾಟಕದ ಮೂಲಕ ರಂಗಭೂಮಿ ಕಲಾವಿದರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಮಲಯಾಳಂ ಹಾಗೂ ತಮಿಳು ಚಿತ್ರರಂಗದಲ್ಲಿ ನೆಡುಮುಡಿ ವೇಣು ಸಕ್ರಿಯವಾಗಿ ಕೆಲಸ ಮಾಡಿದ್ದು, ಅವರು ನಟಿಸಿದ ಸಿನಿಮಾಗಳ ಸಂಖ್ಯೆ 500ಕ್ಕೂ ಅಧಿಕವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.