‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್ ರಾವ್ ನಿಧನ
ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ.
ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್ ರಾವ್ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.
ತುಮಕೂರು ಮೂಲದ ಶಂಕರ್ ರಾವ್ ಅವರು ವೈವಿದ್ಯಮಯ ಪಾತ್ರಗಳನ್ನು ನಿರ್ವಹಿಸಿದ ಅಪಾರ ಅನುಭವ ಉಳ್ಳವರು. ಅದರಲ್ಲೂ ಹಾಸ್ಯ ಪಾತ್ರಗಳಲ್ಲಿ ಮಿಂಚಿ ಕನ್ನಡಿಗರನ್ನು ರಂಜಿಸಿದವರು.
ಶಾಲಾ ದಿನಗಳಿಂದಲೇ ಅವರು ನಟನೆಯಲ್ಲಿ ಅಭಿರುಚಿ ಹೊಂದಿದ್ದರು. 1956ರಲ್ಲಿ ಬೆಂಗಳೂರಿಗೆ ಬಂದರು. ‘ನಟರಂಗ’ ತಂಡದ ಜೊತೆ ಶಂಕರ್ ರಾವ್ ಗುರುತಿಸಿಕೊಂಡಿದ್ದರು. ಹವ್ಯಾಸಿ ರಂಗಭೂಮಿ ಕಲಾವಿದನಾಗಿದ್ದ ಅವರು ಹಲವಾರು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


