ಥ್ರಿಲ್ಲರ್ ಸಿನಿಮಾ ಮೂಲಕ ಮೇಘನಾ ರಾಜ್ ಕಮ್ ಬ್ಯಾಕ್!
ಥ್ರಿಲ್ಲರ್ ಸಿನಿಮಾ ಮೂಲಕ ನಟಿ ಮೇಘನಾ ರಾಜ್ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ವಿಶಾಲ್ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಮೇಘನಾರಾಜ್ ಅಭಿನಯಿಸಲಿದ್ದಾರೆ.

ಥ್ರಿಲ್ಲರ್ ಸಿನಿಮಾ ಮೂಲಕ ನಟಿ ಮೇಘನಾ ರಾಜ್ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ವಿಶಾಲ್ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಮೇಘನಾರಾಜ್ ಅಭಿನಯಿಸಲಿದ್ದಾರೆ.
ಹ್ಯಾಪಿ ನ್ಯೂ ಇಯರ್ ಮತ್ತು ಫ್ರೆಂಚ್ ಬಿರಿಯಾನಿ ಚಿತ್ರಗಳ ಮೂಲಕ ನಿರ್ದೇಶಕರಾಗಿ ಛಾಪು ಮೂಡಿಸಿರುವ ಪನ್ನಗಾಭರಣ, ಈ ಸಿನಿಮಾ ಮೂಲಕ ನಿರ್ಮಾಪಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
ಚಿರಂಜೀವಿ ಸರ್ಜಾ ಅವರ ಜನ್ಮ ದಿನಾಚರಣೆಯಂದು (ಅಕ್ಟೋಬರ್ 17) ಚಿತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಕ್ರೈಮ್ ಥ್ರಿಲ್ಲರ್ ನಲ್ಲಿ ನಾಲ್ಕು ಪ್ರಮುಖ ಪಾತ್ರಗಳಿದ್ದು ಮೇಘನಾ ಪ್ರಾಜೆಕ್ಟ್ ನಲ್ಲಿ ಮೊದಲಿಗರಾಗಿದ್ದಾರೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಸದ್ಯ ನಿರ್ದೇಶಕರು ಉಳಿದ ಕಲಾವಿದರನ್ನು ಅಂತಿಮಗೊಳಿಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಪ್ಲಾನ್ ಮಾಡಿದೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡಲಿದ್ದಾರೆ.
2018 ರಲ್ಲಿ ಇರುವುದೆಲ್ಲವ ಬಿಟ್ಟು ಸಿನಿಮಾದಲ್ಲಿ ಮೇಘನಾ ರಾಜ್ ಕಾಣಿಸಿಕೊಂಡಿದ್ದರು, ಇದರ ಜೊತೆಗೆ ಸೆಲ್ಫಿ ಮಮ್ಮ, ಗೂಗಲ್ ಡ್ಯಾಡಿ ಹಾಗೂ ಬುದ್ಧಿವಂತ 2 ಸಿನಿಮಾಗಳಲ್ಲಿಯೂ ಮೇಘನಾ ಕಾಣಿಸಿಕೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


