ನವೆಂಬರ್ 12ಕ್ಕೆ ಗಣೇಶ್ ನಟನೆಯ ಸಖತ್ ಸಿನಿಮಾ ರಿಲೀಸ್
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸುನಿ ಕಾಂಬಿನೇಷನ್ ನ ಸಖತ್ ಸಿನಿಮಾ ನವೆಂಬರ್ 12ಕ್ಕೆ ರಿಲೀಸ್ ಆಗಲಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸುನಿ ಕಾಂಬಿನೇಷನ್ ನ ಸಖತ್ ಸಿನಿಮಾ ನವೆಂಬರ್ 12ಕ್ಕೆ ರಿಲೀಸ್ ಆಗಲಿದೆ.
ಸಿನಿಮಾ ನಿರ್ಮಾಣ ಮಾಡಿರುವ ಕೆವಿಎನ್ ಪ್ರೊಡಕ್ಷನ್ ಅಕ್ಟೋಬರ್ 24 ರಂದು ಸಿನಿಮಾ ಬಿಡುಗಡೆ ಸಂಬಂಧ ಅಧಿಕೃತ ಮಾಹಿತಿ ನೀಡಲಿದೆ, ಅದೇ ದಿನ ಸಿನಿಮಾ ಟೀಸರ್ ಕೂಡ ರಿಲೀಸ್ ಆಗಲಿದೆ.
ಚಮಕ್ ಸಿನಿಮಾ ನಂತರ ಗಣೇಶ್ ಮತ್ತು ಸುನಿ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಿದೆ. ಸಿನಿಮಾ ರಿಯಾಲಿಟಿ ಶೋ ಅಧರಿಸಿದ ಕಥೆಯಾಗಿದೆ. ಗಣೇಶ್ ಸಿನಿಮಾದಲ್ಲಿ ಅಂಧನ ಪಾತ್ರದಲ್ಲಿ ನಟಿಸಿದ್ದಾರೆ.
ನಿಶ್ವಿಕಾ ನಾಯ್ಡು ಕೂಡ ಸಿನಿಮಾದಲ್ಲಿ ಕುರುಡಿ ಪಾತ್ರದಲ್ಲಿ ನಟಿಸಿದ್ದಾರೆ, ನಟಿ ಸುರಭಿಗೆ ಇದು ಚೊಚ್ಚಲ ಸಿನಿಮಾವಾಗಿದೆ.
ಜೂಡಾ ಸ್ಯಾಂಡಿ ಸಂಗೀತ, ಮತ್ತು ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮಾಳವಿಕಾ ಅವಿನಾಶ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


