ಅಪ್ಪು ಅಗಲಿಕೆಗೆ ಸಂತಾಪ ಸೂಚಿಸಿದ ನಟ ಚಿರಂಜೀವಿ, ಮಹೇಶ್ ಬಾಬು, ಜೂ. ಎನ್ಟಿಆರ್, ಪ್ರಕಾಶ್ ರೈ
ಕನ್ನಡಿಗರ ಕಣ್ಮಣಿಯಾಗಿದ್ದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ಪಯಾಣ ಬೆಳೆಸಿರುವ ಅವರಿಗೆ ಖ್ಯಾತ ನಟ ತೆಲಗು ಮೆಗಾಸ್ಟಾರ್ ಚಿರಂಜೀವಿ...

ಹೈದರಾಬಾದ್: ಕನ್ನಡಿಗರ ಕಣ್ಮಣಿಯಾಗಿದ್ದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಬಾರದ ಲೋಕಕ್ಕೆ ಪಯಾಣ ಬೆಳೆಸಿರುವ ಅವರಿಗೆ ಖ್ಯಾತ ನಟ ತೆಲಗು ಮೆಗಾಸ್ಟಾರ್ ಚಿರಂಜೀವಿ, ನಟ ಮಹೇಶ್ ಬಾಬು, ಜೂ. ಎನ್ಟಿಆರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇದು ಆಘಾತಕಾರಿ ಮತ್ತು ಹೃದಯವಿದ್ರಾವಕ ವಿಷಯವಾಗಿದೆ. ಪುನೀತ್ ರಾಜ್ ಕುಮಾರ್ ಬೇಗ ಹೋದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಸ್ಥರಿಗೆ ನನ್ನ ಕಣ್ಣೀರಿನ ಸಂತಾಪ. ಒಟ್ಟಾರೆಯಾಗಿ ಕನ್ನಡ/ಭಾರತೀಯ ಚಲನಚಿತ್ರ ಬಂಧುಗಳಿಗೆ ಒಂದು ದೊಡ್ಡ ನಷ್ಟ. ಈ ದುರಂತದ ನಷ್ಟವನ್ನು ನಿಭಾಯಿಸುವ ಶಕ್ತಿ ಎಲ್ಲರಿಗೂ ದೇವರು ನೀಡಲಿ ಎಂದು ನಟ ಚಿರಂಜೀವಿ ಟ್ವೀಟ್ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ತುಂಬಾ ಆಘಾತ ಮತ್ತು ತೀವ್ರ ದುಃಖವಾಗಿದೆ. ನಾನು ಭೇಟಿಯಾದ ಮತ್ತು ಸಂವಾದ ನಡೆಸಿದ ಅತ್ಯಂತ ವಿನಮ್ರ ವ್ಯಕ್ತಿಗಳಲ್ಲಿ ಇವರು ಒಬ್ಬರು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಸಂತಾಪಗಳು ಎಂದು ನಟ ಮಹೇಶ್ ಬಾಬು ಟ್ವೀಟ್ ಮಾಡಿದ್ದಾರೆ.
ಹೃದಯ ಹೊಡೆದು ಚೂರಾಗಿದೆ, ನೀವು ಇಷ್ಟು ಬೇಗ ಹೋಗಿದ್ದೀರಿ ಎಂದು ನಂಬಲಾಗುತ್ತಿಲ್ಲ ಎಂದು ಜೂ. ಎನ್ಟಿಆರ್ ಅವರು ಟ್ವೀಟ್ ಮಾಡಿದ್ದಾರೆ.
ಇನ್ನೂ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಲೇ ರಿಯಲ್ ಹಿರೋ ಎನಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್ ಅವರು, 'ಹೃದಯ ವಿದ್ರಾವಕ, ಯಾವಾಗಲೂ ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇನೆ ನನ್ನ ಸಹೋದರ' ಎಂದು ಟ್ವೀಟ್ ಮಾಡಿದ್ದಾರೆ.
ಬಹುಭಾಷಾ ನಟ ಪ್ರಕಾಶ್ ರೈ ಕೂಡ ಪನೀತ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, 'Ahh ನೋ .. ಬೇಗ ಹೋದೆ ನನ್ನ ಪ್ರೀತಿಯ ಅಪ್ಪು. ನಾನು ಛಿದ್ರಗೊಂಡಿದ್ದೇನೆ .. ಹೃದಯ ಒಡೆದಿದೆ .. ಇದು ಸರಿಯಲ್ಲ' ಎಂದು ಟ್ವೀಟ್ ಮಾಡಿದ್ದಾರೆ.
Shocked and deeply saddened by the tragic news of Puneeth Rajkumar's demise. One of the most humble people I've met and interacted with. Heartfelt condolences to his family and loved ones
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


