ಸಿನಿಮಾ ಸುದ್ದಿ

ಚೆನ್ನೈ: ರಜನಿಕಾಂತ್‌ ಆಸ್ಪತ್ರೆಗೆ ದಾಖಲು

ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.

ಚೆನ್ನೈ: ರಜನಿಕಾಂತ್‌ ಆಸ್ಪತ್ರೆಗೆ ದಾಖಲು
ರಜನಿಕಾಂತ್
Published On :

ಚೆನ್ನೈ: ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌  ರಜನಿಕಾಂತ್  ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ  ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು  ಹೇಳಿವೆ.

2020ರಲ್ಲಿ, ರಜನಿಕಾಂತ್​  ಅವರಿಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಇದಾದ ಕೆಲವು ದಿನಗಳ ನಂತರ, ಅವರು 2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪ್ರಾರಂಭಿಸಲು ಯೋಜಿಸಿದ್ದ ರಾಜಕೀಯ ಪಕ್ಷ  ಆರಂಭಿಸುವುದಿಲ್ಲ ಎಂದು ಅವರು ಘೋಷಿಸಿದ್ದರು.

Story image

ಮೊನ್ನೆಯಷ್ಟೆ ದೆಹಲಿಯಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ರಜನಿಕಾಂತ್‌ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ  ಸ್ವೀಕರಿಸಿದ್ದರು. ಪ್ರಶಸ್ತಿ ಪಡೆಯಲು ದೆಹಲಿಗೆ ತೆರಳಿದ್ದ ಅವರು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಜನ್ಯಪೂರ್ವಕವಾಗಿ ಭೇಟಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.