ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಮಂಗಳಮುಖಿಯರಿಂದ ದಾಳಿ..!
ಸ್ಯಾಂಡಲ್ ವುಡ್ ನ ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರ ಹಾಗೂ ಉದಯೋನ್ಮುಖ ನಟ ರಕ್ಷಕ್ ಸೇನಾ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನ ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರ ಹಾಗೂ ಉದಯೋನ್ಮುಖ ನಟ ರಕ್ಷಕ್ ಸೇನಾ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ.
ಮಂಗಳವಾರ ರಾತ್ರಿ 9 ಗಂಟೆಗೆ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್, ಜಿಮ್ನಿಂದ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹೆಬ್ಬಾಳ ಬಳಿ ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ. ಹೆಬ್ಬಾಳ ಪ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದಿದ್ದು, ಪರಿಣಾಮ ರಕ್ಷಕ್ ಬೈಕ್ನಿಂದ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ರಕ್ಷಕ್ ಕಾಲಿಗೆ ತರಚಿದ ಗಾಯಗಳಾಗಿವೆ. ಅಲ್ಲದೇ, ಮಂಗಳಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ರಕ್ಷಕ್ ಫ್ಲೈ ಓವರ್ ಮೇಲೆಯೇ ಬೈಕ್ ಬಿಟ್ಟು ಓಡಿಹೋಗಿದ್ದಾರೆ. ಬಳಿಕ ಪೊಲೀಸರ ಸಹಾಯದಿಂದ ಬೈಕ್ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಹೆಬ್ಬಾಳ ಫ್ಲೈ ಓವರ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್ನಿಂದ ಕೆಳಗೆ ಬಿದ್ದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ಬೈಕ್ ಗೂ ಕೂಡ ಡ್ಯಾಮೇಜ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನು ಇತ್ತೀಚೆಗಷ್ಟೇ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಮಾತನಾಡಿದ್ದರು. ಈಗಾಗಲೇ ಈ ಕುರಿತಂತೆ ಅವರು ತಯಾರಿಯಲ್ಲಿದ್ದು, ತಂದೆ ಬುಲೆಟ್ ಪ್ರಕಾಶ್ ಅವರ ನಿಧನದ ಬಳಿಕ ರಕ್ಷಕ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


