ಡಿಸೆಂಬರ್ 31 ರಂದು ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ' ತೆರೆಗೆ
ನಟ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ 2021ರ ಡಿ.31ರಂದು ತೆರೆ ಕಾಣಲಿದೆ.

ನಟ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ 2021ರ ಡಿ.31ರಂದು ತೆರೆ ಕಾಣಲಿದೆ.
ಕಿರಣ್ ರಾಜ್ ಕೆ. ನಿರ್ದೇಶನದ ಈ ಚಿತ್ರದ ಮೊದಲ ವಿಡಿಯೊ ಹಾಡು ‘ಹೆಂಗೋ ಇದ್ದ ಧರ್ಮ, ತಗಲ್ಲಾಕ್ಕೋತು ಕರ್ಮ..’ ಗುರುವಾರ ಬಿಡುಗಡೆಯಾಗಿದ್ದು, 6 ನಿಮಿಷಗಳ ಹಾಡಿನಲ್ಲಿ ಧರ್ಮ ಮತ್ತು ಚಾರ್ಲಿ ನಡುವೆ ನಡೆಯಲಿರುವ ಟಾಮ್ ಆ್ಯಂಡ್ ಜೆರಿ ಆಟ, ಧರ್ಮನಿಗೆ ಚಾರ್ಲಿ ನೀಡುವ ಚಿತ್ರಹಿಂಸೆಯನ್ನು ಸೆರೆಹಿಡಿಯಲಾಗಿದೆ.
ರಕ್ಷಿತ್ ಶೆಟ್ಟಿ ಅಭಿನಯದ ‘ಕಿರಿಕ್ ಪಾರ್ಟಿ’, ‘ಅವನೇ ಶ್ರೀಮನ್ನಾರಾಯಣ’ ಚಿತ್ರವೂ ವರ್ಷದ ಕೊನೆಯ ಶುಕ್ರವಾರ ಬಿಡುಗಡೆಯಾಗಿತ್ತು. ಈ ವರ್ಷದ ಕೊನೆಯ ಶುಕ್ರವಾರ(ಡಿ.31) ಹೇಮಂತ್ ಎಂ.ರಾವ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆಗೆ ರಕ್ಷಿತ್ ಶೆಟ್ಟಿ ಅವರು ಮೊದಲು ನಿರ್ಧರಿಸಿದ್ದರು.
ಈ ಸಂದರ್ಭದಲ್ಲಿ ಸೆಪ್ಟೆಂಬರ್– ಅಕ್ಟೋಬರ್‌ನಲ್ಲೇ ‘777 ಚಾರ್ಲಿ’ ಬಿಡುಗಡೆಗೆ ನಿರ್ಧರಿಸಲಾಗಿತ್ತು. ಆದರೆ ಲಾಕ್‌ಡೌನ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ನಿರ್ಬಂಧದ ಕಾರಣದಿಂದಾಗಿ ಬಿಗ್‌ಬಜೆಟ್ ಚಿತ್ರಗಳ ಬಿಡುಗಡೆ ವಿಳಂಬವಾಗಿದೆ. ಈ ಕಾರಣದಿಂದಾಗಿ ಡಿಸೆಂಬರ್ ಅಂತ್ಯಕ್ಕೆ ‘777 ಚಾರ್ಲಿ’ ಬಿಡುಗಡೆಗೆ ರಕ್ಷಿತ್ ನಿರ್ಧರಿಸಿದ್ದಾರೆ. ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ಸಂಗೀತಾ ಶೃಂಗೇರಿ ಚಿತ್ರದ ನಾಯಕಿ. ಚಿತ್ರದಲ್ಲಿ ನಟ, ನಿರ್ದೇಶಕ ರಾಜ್ ಬಿ.ಶೆಟ್ಟಿ, ಡ್ಯಾನಿಶ್ ಸೇಟ್ ತಾರಾಗಣದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


