ತಂದೆ-ತಾಯಿ ವಿರುದ್ಧವೇ ದೂರು ದಾಖಲಿಸಿದ ತಮಿಳು ನಟ ವಿಜಯ್!
ಖ್ಯಾತ ತಮಿಳು ನಟ ವಿಜಯ್ ಅವರು ತಮ್ಮ ಸ್ವಂತ ಪೋಷಕರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಚೆನ್ನೈ: ಖ್ಯಾತ ತಮಿಳು ನಟ ವಿಜಯ್ ಅವರು ತಮ್ಮ ಸ್ವಂತ ಪೋಷಕರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.
ಈ ಹಿಂದೆ ಮತದಾನದ ವೇಳೆ ಸೈಕಲ್ ನಲ್ಲಿ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದ ವಿಜಯ್ ಭಾರಿ ಸುದ್ದಿಗೆ ಗ್ರಾಸವಾಗಿದ್ದರು. ಕೇಂದ್ರ ಸರ್ಕಾರದ ಪೆಟ್ರೋಲ್ ದರ ಏರಿಕೆ ವಿರುದ್ಧ ವಿಜಯ್ ಈ ರೀತಿ ಮಾಡಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ದೇಶಾದ್ಯಂತ ವ್ಯಾಪಕ ಚರ್ಚೆಯಾಗಿತ್ತು. ಇದೀಗ ಇದರ ಬೆನ್ನಲ್ಲೇ ತಮ್ಮ ತಂದೆ ತಾಯಿ ವಿರುದ್ಧವೇ ಪೊಲೀಸ್ ದೂರು ದಾಖಲಿಸುವ ಮೂಲಕ ವಿಜಯ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.
ದಳಪತಿ ವಿಜಯ್ ತಮ್ಮ ತಂದೆ ತಾಯಿ ಸೇರಿ 11 ಜನರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ವಿಜಯ್ ತಂದೆ ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್. ಅವರು ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರು ‘ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಮ್’ ಪಕ್ಷ ಆರಂಭಿಸಿದ್ದರು. ಆದರೆ, ಅದು ವಿಜಯ್ಗೆ ಇಷ್ಟವಿಲ್ಲ. ಈ ಕಾರಣಕ್ಕೆ ರಾಜಕೀಯದಲ್ಲಿ ತಮ್ಮ ಮತ್ತು ತಮ್ಮ ಫ್ಯಾನ್ ಕ್ಲಬ್ನ ಹೆಸರು ಬಳಕೆ ಮಾಡದಂತೆ ತಡೆಕೋರಬೇಕು ಎಂದು ವಿಜಯ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.
ವಿಜಯ್ ತಂದೆ ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್. ಅವರು ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರು ‘ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಮ್’ ಪಕ್ಷ ಆರಂಭಿಸಿದ್ದರು. ಆದರೆ, ಅದು ವಿಜಯ್ಗೆ ಇಷ್ಟವಿಲ್ಲ. ಈ ಕಾರಣಕ್ಕೆ ರಾಜಕೀಯದಲ್ಲಿ ತಮ್ಮ ಮತ್ತು ತಮ್ಮ ಫ್ಯಾನ್ ಕ್ಲಬ್ನ ಹೆಸರು ಬಳಕೆ ಮಾಡದಂತೆ ತಡೆಕೋರಬೇಕು ಎಂದು ವಿಜಯ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.
‘ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್ ಇಯಕ್ಕಮ್’ ಪಕ್ಷಕ್ಕೆ ಚಂದ್ರಶೇಖರ್ ಪ್ರಧಾನ ಕಾರ್ಯದರ್ಶಿ. ಅವರ ತಾಯಿ ಶೋಭಾ ಚಂದ್ರಶೇಖರ್ ಖಜಾಂಚಿ. ಪದ್ಮನಾಭನ್ ಪಕ್ಷದ ನಾಯಕ. ಕಳೆದ ವರ್ಷ ವಿಜಯ್ ರಾಜಕೀಯಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಅವರು ಇದೇ ಪಕ್ಷ ಸೇರ್ಪಡೆ ಆಗುತ್ತಾರೆ ಎನ್ನುವ ಮಾತೂ ಹರಿದಾಡಿತ್ತು. ಈ ಮೂಲಕ 2021ರ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ತಂದೆಯ ರಾಜಕೀಯ ಪಕ್ಷಕ್ಕೆ ತಮ್ಮ ಯಾವುದೇ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ನನ್ನ ತಂದೆ ನೀಡಿರುವ ರಾಜಕೀಯ ಹೇಳಿಕೆಗಳೊಂದಿಗೆ ನನಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಸಂಬಂಧವಿಲ್ಲ ಎಂದು ವಿಜಯ್ ಹೇಳಿದ್ದರು. ಪಕ್ಷಕ್ಕೆ ವಿಜಯ್ ಹೆಸರಿದೆ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಆಗುವ ಸಾಧ್ಯತೆ ಇರುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ವಿಜಯ್ ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.
ಸಿನಿಮಾ ಬಗ್ಗೆ ಹೇಳೋದಾದರೆ ವಿಜಯ್ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಇತ್ತೀಚೆಗೆ ಫಸ್ಟ್ ಲುಕ್ ರಿಲೀಸ್ ಆಗಿತ್ತು. ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಸನ್ ಪಿಕ್ಚರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.
ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ವಿಜಯ್ ನಡೆಯನ್ನು ಫ್ಯಾನ್ಸ್ ಬೆಂಬಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


