ಸಿನಿಮಾ ಸುದ್ದಿ

ಬೆಂಗಳೂರು: ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್!

ರಾಜ್ಯದಲ್ಲಿ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಇನ್ನು 10 ಗಂಟೆ ಬಳಿಕವೂ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಓಡಾಡುತ್ತಿದ್ದು ಇದನ್ನು ಪ್ರಶ್ನಿಸಿದ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.

ಬೆಂಗಳೂರು: ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್!
ದಿವ್ಯಾ ಸುರೇಶ್
Published On :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಇನ್ನು 10 ಗಂಟೆ ಬಳಿಕವೂ ಎಂಜಿ ರಸ್ತೆಯಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಓಡಾಡುತ್ತಿದ್ದು ಇದನ್ನು ಪ್ರಶ್ನಿಸಿದ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. 

Story image

ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಪೊಲೀಸರು ಚರ್ಚ್ ಸ್ಟ್ರೀಟ್ ನಲ್ಲಿದ್ದ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಮುಚ್ಚಿಸುತ್ತಿದ್ದರು. ಈ ವೇಳೆ ಗೆಳೆಯನ ಜೊತೆ ಬಂದಿದ್ದ ದಿವ್ಯಾ ಸುರೇಶ್ ಅವರನ್ನು ಪೊಲೀಸರು ಪ್ರಶ್ನಿಸಿದ್ದಾರೆ. 

Story image

ಇದನ್ನು ಮಾಧ್ಯಮದವರೂ ಸೆರೆಹಿಡಿಯಲು ಮುಂದಾದಾಗ ದಿವ್ಯಾ ಸುರೇಶ್ ಮತ್ತು ಸ್ನೇಹಿತ ಮಾಧ್ಯಮದವರ ಕ್ಯಾಮೆರಾವನ್ನು ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಜಗಳ ಮಾಡದಂತೆ ದಿವ್ಯಾ ಸುರೇಶ್ ಗೆ ಎಚ್ಚರಿಸಿದ್ದಾರೆ. 

Story image

ಬುಕ್ ಮಾಡಿರುವ ಕ್ಯಾಬ್ ಬಂದಿದ್ದು ಹೋಗುವಂತೆ ಪೊಲೀಸರು ಸೂಚಿಸಿದ ಬಳಿಕ ಇಬ್ಬರು ಅಲ್ಲಿಂದ ತೆರಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.