52ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಪನೋರಮಾ ವಿಭಾಗಕ್ಕೆ 4 ಕನ್ನಡ ಚಿತ್ರಗಳ ಆಯ್ಕೆ
ಗೋವಾದಲ್ಲಿ ನಡೆಯಲಿರುವ 52 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕಾಗಿ ಭಾರತೀಯ ಪನೋರಮಾ ವಿಭಾಗದಲ್ಲಿ 25 ಫೀಚರ್ ಮತ್ತು 20 ನಾನ್‌ಫೀಚರ್ ಚಿತ್ರಗಳು ಆಯ್ಕೆಯಾಗಿವೆ.

ಮುಂಬೈ: ಗೋವಾದಲ್ಲಿ ನಡೆಯಲಿರುವ 52 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕಾಗಿ ಭಾರತೀಯ ಪನೋರಮಾ ವಿಭಾಗದಲ್ಲಿ 25 ಫೀಚರ್ ಮತ್ತು 20 ನಾನ್‌ಫೀಚರ್ ಚಿತ್ರಗಳು ಆಯ್ಕೆಯಾಗಿವೆ. ಈ ಚಿತ್ರಗಳನ್ನು ಗೋವಾದಲ್ಲಿ ಇದೆ 20 ರಿಂದ 28 ರವರೆಗೆ ಪ್ರದರ್ಶಿಸಲಾಗುವುದು.
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಗೋವಾ ಸರ್ಕಾರದ ಸಹಭಾಗಿತ್ವದಲ್ಲಿ ಈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಿದೆ. ಚಿತ್ರೋತ್ಸವದ ಪನೋರಮಾ ವಿಭಾಗದಲ್ಲಿ, ಕನ್ನಡದ 4 ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.
ಸಾಗರ ಪುರಾಣಿಕ ನಿರ್ದೇಶನದ ’ಡೊಳ್ಳು’, ಪ್ರವೀಣ ಕೃಪಾಕರ ಅವರ ’ತಲೆದಂಡ’, ಮನಸೊರೆ ನಿರ್ದೇಶನದ ’ಆಕ್ಟ್ 1978’ ಮತ್ತು ಗಣೇಶ ಹೆಗಡೆ ನಿರ್ದೇಶನದ ’ನೀಲಿ ಹಕ್ಕಿ’ ಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಫೀಚರ್ಸ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರ ನೇತೃತ್ವದಲ್ಲಿ, 12 ಜ್ಯೂರಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


