ಪತ್ರ ಮೂಲಕ ಭಾವನೆ ಹಂಚಿಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 20 ದಿನ ಕಳೆದರೂ ಈವೆರೆಗೂ ಮೌನವಾಗಿಯೇ ಇದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದಾಗಿನಿಂದಲೂ ಮೌನಕ್ಕೆ ಶರಣಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ, ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಚಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ ಅವರ ವಿದಾಯ ತಂದಿತ್ತ ದು:ಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ. ಆದರೂ, ಇಂತಹ ಸಂದರ್ಭದಲ್ಲಿ ಎಲ್ಲಿಯೂ ಸಂಯಮ ಕಳೆದುಕೊಳ್ಳದೇ. ಅಹಿತಕರ ಘಟನೆಗಳು ನಡೆಯದಂತೆ ಅತ್ಯಂತ ಗೌರವಯುತವಾಗಿ ಪುನೀತ್ ರಾಜ್ ಕುಮಾರ್ ಬೀಳ್ಗೋಡುಗೆ ನೀಡುವಲ್ಲಿ ಸಹಕರಿಸಿದ ನಾಡಿನ ಎಲ್ಲ ಅಭಿಮಾನಿ ದೇವರುಗಳು ಹಾಗೂ ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಧನ್ಯವಾದಗಳು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


