ಶೀಘ್ರದಲ್ಲೇ 'ಕಬ್ಜ' ಐದನೇ ಹಂತದ ಚಿತ್ರೀಕರಣ" ಆರಂಭ
ಬಹು ನಿರೀಕ್ಷಿತ "ಕಬ್ಜ" ಚಿತ್ರದ ಐದನೇ ಹಂತದ ಚಿತ್ರೀಕರಣ ಇದೇ 4 ರಿಂದ ಆರಂಭವಾಗಲಿದೆ. ಚಿತ್ರೀಕರಣಕ್ಕಾಗಿ ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ ಮಿನರ್ವ ಮಿಲ್ ನಲ್ಲಿ ಅದ್ದೂರಿಯಾಗಿ ಸೆಟ್ ನಿರ್ಮಾಣವಾಗಿದೆ. ಇದೇ ಸೆಟ್ ನಲ್ಲಿ ಸುಮಾರು 42 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

ಬೆಂಗಳೂರು: ಬಹು ನಿರೀಕ್ಷಿತ "ಕಬ್ಜ" ಚಿತ್ರದ ಐದನೇ ಹಂತದ ಚಿತ್ರೀಕರಣ ಇದೇ 4 ರಿಂದ ಆರಂಭವಾಗಲಿದೆ. ಚಿತ್ರೀಕರಣಕ್ಕಾಗಿ ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ ಮಿನರ್ವ ಮಿಲ್ ನಲ್ಲಿ ಅದ್ದೂರಿಯಾಗಿ ಸೆಟ್ ನಿರ್ಮಾಣವಾಗಿದೆ. ಇದೇ ಸೆಟ್ ನಲ್ಲಿ ಸುಮಾರು 42 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.
ರಿಯಲ್ ಸ್ಟಾರ್ ಉಪೇಂದ್ರ, ಬಾಲಿವುಡ್ ನಟ ನವಾಬ್ ಶಾ ಸೇರಿದಂತೆ ಅನೇಕ ಹೆಸರಾಂತ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಈ ಹಂತದ ಚಿತ್ರೀಕರಣ ಮುಗಿದರೆ, ಬಹುತೇಕ ಚಿತ್ರೀಕರಣ ಮುಗಿದಂತೆ. ಕೊನೆಯ ಹಂತದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯಲಿದೆ. ಖ್ಯಾತ ನಿರ್ದೇಶಕ ಆರ್.ಚಂದ್ರು ನಿರ್ದೇಶಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ ಅವರು ಅಭಿನಯಿಸುತ್ತಿರುವುದು ಅಭಿಮಾನಿಗಳ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ.
ಚಿತ್ರ ಬಿಡುಗಡೆಗೆ ಕರ್ನಾಟಕವಷ್ಟೇ ಅಲ್ಲದೇ ಇತರ ರಾಜ್ಯಗಳಲ್ಲೂ ತುದಿಗಾಲಿನಲ್ಲಿ ಕಾದಿದ್ದಾರೆ.ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೆ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ.
ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್,ವಿಜಯ್, ಪೀಟರ್ ಹೆನ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವಾಬ್ ಶಾ, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


