ಹಿರಿಯ ನಟ ಜಿ.ಕೆ. ಗೋವಿಂದ ರಾವ್ ವಿಧಿವಶ
ಹಿರಿಯ ರಂಗಕರ್ಮಿ ಜಿ.ಕೆ. ಗೋವಿಂದ ರಾವ್ (86) ಅವರು ಶುಕ್ರವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಹಿರಿಯ ರಂಗಕರ್ಮಿ ಜಿ.ಕೆ. ಗೋವಿಂದ ರಾವ್ (86) ಅವರು ಶುಕ್ರವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.
ಗೋವಿಂದ ರಾವ್ ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆಂದು ವರದಿಗಳು ತಿಳಿಸಿವೆ.
ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗಿದೆ.
ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಗೋವಿಂದ ರಾವ್ ನಟಿಸಿದ್ದರು. ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


