ಸಿನಿಮಾ ಸುದ್ದಿ

ಶ್ರೀಮುರುಳಿ ನಟನೆಯ 'ಮದಗಜ' ಡಿಸೆಂಬರ್ ನಲ್ಲಿ ರಿಲೀಸ್

ರೋರಿಂಗ್ ಸ್ಟಾರ್ ಶ್ರೀಮುರುಳಿ ಮತ್ತು ಆಶಿಕಾ ರಂಗನಾಥ್ ನಟನೆಯ ಮದಗಜ ಸಿನಿಮಾವನ್ನು ಮಹೇಶ್ ಕುಮಾರ್ ನಿರ್ದೇಶಿಸುತ್ತಿದ್ದು, ಸದ್ಯ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

ಶ್ರೀಮುರುಳಿ ನಟನೆಯ 'ಮದಗಜ' ಡಿಸೆಂಬರ್ ನಲ್ಲಿ ರಿಲೀಸ್
ಮದಗಜ ಸಿನಿಮಾ ಸ್ಟಿಲ್
Published On :

ರೋರಿಂಗ್ ಸ್ಟಾರ್ ಶ್ರೀಮುರುಳಿ ಮತ್ತು ಆಶಿಕಾ ರಂಗನಾಥ್ ನಟನೆಯ ಮದಗಜ ಸಿನಿಮಾವನ್ನು ಮಹೇಶ್ ಕುಮಾರ್ ನಿರ್ದೇಶಿಸುತ್ತಿದ್ದು, ಸದ್ಯ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

ಸಿನಿಮಾವನ್ನು ಡಿಸೆಂಬರ್ ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿರುವ ಚಿತ್ರತಂಡ, ಮದಗಜ ರಿಲೀಸ್ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.

ಚಿತ್ರತಂಡ ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಮಾಡಲು ನಿರ್ಧರಿಸಿತ್ತು, ಆದರೆ ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್ ಮುಂದಕ್ಕೆ ಹೋಯಿತು.ಇದೇ ವೇಳೆ ಈ ತಿಂಗಳಲ್ಲಿ ಸಾಂಗ್ ರಿಲೀಸ್ ಮಾಡಲು ನಿರ್ದೇಶಕರು ಪ್ಲಾನ್ ಮಾಡಿದ್ದಾರೆ. ಶೀಘ್ರವೇ ದಿನಾಂಕ ಘೋಷಿಸಲಿದ್ದಾರೆ.

ಉಮಾಪತಿ ನಿರ್ಮಾಣದ ಮದಗಜ ಸಿನನಿಮಾದಲ್ಲಿ ಶ್ರೀಮುರುಳಿ ಜೊತೆ ಆಶಿಕಾ ರಂಗನಾಥ್ ಮೊದಲ ಬಾರಿಗೆ ನಟಿಸಿದ್ದಾರೆ. ಜಗಪತಿ ಬಾಬು, ದೇವಯಾನಿ, ರಂಗಾಯಣ ರಘು, ಚಿಕ್ಕಣ್ಣ ಮತ್ತು ಶಿವರಾಜು ಕೆಆರ್ ಪೇಟೆ ನಟಿಸಿದ್ದಾರೆ.

ಅಯೋಗ್ಯ ನಿರ್ದೇಶಕ ಮಹೇಶ್ ಕುಮಾರ್ ಮದಗಜ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮದಗಜ ಕನ್ನಡದ ಬಹು ನಿರೀಕ್ಷಿತ ಸಿನಿಮಾವಾಗಿದೆ. ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಇದೇ ವೇಳೆ  ಶ್ರೀಮುರುಳಿ ಭಗೀರ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.