ಸಿನಿಮಾ ಸುದ್ದಿ

ಹೈದರಾಬಾದ್: ಚಿರಂಜೀವಿ ಅಳಿಯ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನಗರದ ದುರ್ಗಂ ಚೆರುವ ಕೇಬಲ್ ಸೇತುವೆ ಬಳಿ ಕಳೆದ ರಾತ್ರಿ ಸ್ಪೋರ್ಟ್ಸ್ ಬೈಕ್ ಅಪಘಾತವಾಗಿ ತೆಲುಗು ನಟ ಸಾಯಿ ಧರ್ಮ ತೇಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೈದರಾಬಾದ್: ಚಿರಂಜೀವಿ ಅಳಿಯ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ನಟ ಸಾಯಿ ಧರ್ಮ ತೇಜ್(ಸಂಗ್ರಹ ಚಿತ್ರ)
Published On :

ಹೈದರಾಬಾದ್: ನಗರದ ದುರ್ಗಂ ಚೆರುವ ಕೇಬಲ್ ಸೇತುವೆ ಬಳಿ ಕಳೆದ ರಾತ್ರಿ ಸ್ಪೋರ್ಟ್ಸ್ ಬೈಕ್ ಅಪಘಾತವಾಗಿ ತೆಲುಗು ನಟ ಸಾಯಿ ಧರ್ಮ ತೇಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಸಾಯಿ ಧರ್ಮ ತೇಜ್ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಹೊಟ್ಟೆಯ ಮತ್ತು ಎದೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ. ಖ್ಯಾತ ನಟ ಚಿರಂಜೀವಿ ಅವರ ಅಳಿಯನಾಗಿರುವ ಸಾಯಿ ಧರ್ಮ ತೇಜ್ ಅವರ ಸ್ಪೋರ್ಟ್ಸ್ ಬೈಕ್ ನ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೈಕ್ ಸ್ಕಿಡ್ ಆಗಿದ್ದರಿಂದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಹೈದರಾಬಾದ್ ನ ಔಟರ್ ರಿಂಗ್ ರೋಡ್ ನಿಂದ ಸರ್ವಿಸ್ ರೋಡ್ ಗೆ ಪ್ರವೇಶಿಸುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬೈಕ್ ಸ್ಕಿಡ್ ಆಗುತ್ತಿದ್ದಂತೆ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಸಾಯಿ ತೇಜ್ ಬಿದ್ದಿದ್ದಾರೆ. ಅಪಘಾತಕ್ಕೆ ಅತಿ ವೇಗವಾಗಿ ಬೈಕ್ ಚಾಲನೆ ಮಾಡಿದ್ದೇ ಕಾರಣ ಎಂದು ಪೊಲೀಸರು ಪ್ರಾಥಮಿಕ ತನಿಖೆಯಿಂದ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.