ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಸೋದರ ಅಳಿಯನ ಪತ್ನಿ ಮೇಲೆ ಹಲ್ಲೆ, ಬಲವಂತವಾಗಿ ವಿಷ ಕುಡಿಸಿದ ಆರೋಪ!
ತಮ್ಮ ಸೋದರ ಅಳಿಯನ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸ್ಯಾಂಡಲ್ ವುಡ್ ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಆರೋಪ ಕೇಳಿಬಂದಿದೆ.

ವಿಜಯಪುರ: ತಮ್ಮ ಸೋದರ ಅಳಿಯನ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸ್ಯಾಂಡಲ್ ವುಡ್ ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಆರೋಪ ಕೇಳಿಬಂದಿದೆ.
ಸನಾ ಕರಜಗಿ ಮೇಲೆ ತಾಳಿಕೋಟೆ ಹಲ್ಲೆ, ಬಲವಂತವಾಗಿ ವಿಷ ಕೂಡ ಕುಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದಿಂದಾಗಿ, ಅಕ್ಕನ ಪುತ್ರ ಫಯಾಜ್ ಕರಜಗಿ ಪರವಾಗಿ ನಿಂತು ರಾಜು ಅವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸನಾ ಕರಜಗಿ ಅವರ ತಾಯಿ ಫಾತಿಮಾ ಶಿರಹಟ್ಟಿ ವಿಜಯಪುರ ಮಹಿಳಾ ಠಾಣೆಗೆ ದೂರು ಸಲ್ಲಿಸಿದ್ದಾರೆ. ರಾಜು ತಾಳಿಕೋಟೆ, ಪತ್ನಿ ಪ್ರೇಮಾ ತಾಳಿಕೋಟೆ, ಫಯಾಜ್ ಕರಜಗಿ, ಸನಾ ಭಾವ ಪಿಂಟು ಸೇರಿ ಆರು ಜನರ ವಿರುದ್ಧ ದೂರು ದಾಖಲಾಗಿದೆ. ತಮ್ಮ ಮೇಲೆ ಸನಾ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ರಾಜು ತಾಳಿಕೋಟೆ ಪ್ರತಿ ಆರೋಪ ಮಾಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಜು ತಾಳಿಕೋಟೆ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಸನಾ ಸಂಬಂಧಿಕರು ತಮ್ಮ ಮೇಲೆ ಹಲ್ಲೆ ನಡೆಸಿ, ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರಾಜು ತಾಳಿಕೋಟೆ ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ, ಸನಾ ಕರಜಗಿ ಸಂಬಂಧಿಕ ಎಸ್.ಕೆ ಮೋದಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಅವರು ತಿಳಿಸಿದ್ದಾರೆ.
ಸದ್ಯ ಸನಾ ಕರಜಗಿ(ಫಯಾಜ್ ಪತ್ನಿ) ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


