ಸ್ಯಾಂಡಲ್ ವುಡ್ ನ ಯುವ ಸಂಭಾಷಣೆಕಾರ ಗುರು ಕಶ್ಯಪ್ ನಿಧನ; ಕಲಾವಿದರ ಕಂಬನಿ
ಸ್ಯಾಂಡಲ್ ವುಡ್ ನ ಮತ್ತೊಬ್ಬ ಜನಪ್ರಿಯ ಸಂಭಾಷಣೆ ಬರಹಗಾರ ಗುರು ಕಶ್ಯಪ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕಳೆದ ರಾತ್ರಿ ಗುರು ಕಶ್ಯಪ್ ಮೃತಪಟ್ಟಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಬ್ಬ ಜನಪ್ರಿಯ ಸಂಭಾಷಣೆ ಬರಹಗಾರ ಗುರು ಕಶ್ಯಪ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಕಳೆದ ರಾತ್ರಿ ಗುರು ಕಶ್ಯಪ್ ಮೃತಪಟ್ಟಿದ್ದಾರೆ. ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೋಗುವಾಗ ದಾರಿ ಮಧ್ಯದಲ್ಲೇ ವಿಧಿವಶರಾದರು. ಅವರಿಗೆ 45 ವರ್ಷ ವಯಸ್ಸಾಗಿತ್ತು.
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸುಂದರಾಂಗ ಜಾಣ’, ರಮೇಶ್ ಅರವಿಂದ್ ನಟನೆಯ ‘ಪುಷ್ಪಕ ವಿಮಾನ’, ಪ್ರಿಯಾಂಕಾ ಉಪೇಂದ್ರ ನಟಿಸಿದ್ದ ‘ದೇವಕಿ’, 2ನೇ ಲಾಕ್ ಡೌನ್ ಗೆ ಮೊದಲು ಬಿಡುಗಡೆಯಾಗಿದ್ದ ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಸಿನಿಮಾಗಳಿಗೆ ಗುರು ಕಶ್ಯಪ್ ಡೈಲಾಗ್ ಬರೆದಿದ್ದರು.
ಡಾಲಿ ಧನಂಜಯ್ ನಟನೆಯ ‘ಮಾನ್ಸೂನ್ ರಾಗ’, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟನೆಯ ‘ಬೈರಾಗಿ’, ‘ವೀಲ್ ಚೇರ್ ರೋಮಿಯೋ’ ಮುಂತಾದ ಅನೇಕ ಚಿತ್ರಗಳಿಗೆ ಗುರು ಕಶ್ಯಪ್ ಸಂಭಾಷಣೆ ಬರೆಯುತ್ತಿದ್ದರು. ಯಶಸ್ಸಿನ ಏಣಿಯನ್ನು ಹತ್ತುತ್ತಿರುವಾಗಲೇ ಗುರು ಕಶ್ಯಪ್ ಬಾರದ ಲೋಕಕ್ಕೆ ತೆರಳಿದ್ದಾರೆ.
ಕಂಬನಿ ಮಿಡಿದ ಸ್ಯಾಂಡಲ್ವುಡ್: ಪತ್ನಿ ಹಾಗೂ ಪುತ್ರಿಯನ್ನು ಅಗಲಿರುವ ಗುರು ಕಶ್ಯಪ್ ನಿಧನಕ್ಕೆ ಸ್ಯಾಂಡಲ್ ವುಡ್ ಕಲಾವಿದರು ಕಂಬನಿ ಮಿಡಿದಿದ್ದಾರೆ.
ನಾನು ಕಂಡಂತ ಅತಿ ಪ್ರತಿಭಾವಂತರಲ್ಲಿ ಗುರುಕಶ್ಯಪ್ ಕೂಡ ಒಬ್ಬರು.ಪುಷ್ಪಕವಿಮಾನ,ಸುಂದರಾಂಗಜಾಣ,100 ಚಿತ್ರಗಳ dialogue writer..ಸಂಜೆ ನಗುತ್ತಾ normal ಆಗಿ ಇದ್ದವರು ರಾತ್ರಿ ಜೀವ ತೊರದಿದ್ದಾರೆ! ಒಬ್ಬ ಒಳ್ಳೆಯ ವ್ಯಕ್ತಿ, ಶ್ರೇಷ್ಠ ಬರಹಗಾರರನ್ನು ಕಳೆದು ಕೊಂಡಿದ್ದೇವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


