'Chaos' ಸಿನಿಮಾದಲ್ಲಿ ಅಕ್ಷಿತ್ ಶಶಿಕುಮಾರ್ ಗೆ ಅದಿತಿ ಪ್ರಭುದೇವ ನಾಯಕಿ!
ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಚಲನಚಿತ್ರ ನಿರ್ದೇಶನದ ಬಗ್ಗೆ ಒಲವು ಹೊಂದಿದ್ದಾರೆ. ತಮ್ಮ ವೃತ್ತಿ ಬದಲಿಸಿ ನಿರ್ದೇಶನಕ್ಕೆ ಇಳಿದಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಚಲನಚಿತ್ರ ನಿರ್ದೇಶನದ ಬಗ್ಗೆ ಒಲವು ಹೊಂದಿದ್ದಾರೆ. ತಮ್ಮ ವೃತ್ತಿ ಬದಲಿಸಿ ನಿರ್ದೇಶನಕ್ಕೆ ಇಳಿದಿದ್ದಾರೆ. ಫಿಲ್ಮ್ ಮೇಕಿಂಗ್ ಕೋರ್ಸ್ ತರಬೇತಿ ಪಡೆದ ನಂತರ ಚೊಚ್ಚಲ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅಕ್ಷಿತ್ ಶಶಿಕುಮಾರ್ ಮತ್ತು ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿದ್ದಾರೆ.
ಚಿತ್ರೀಕರಣ ಮುಗಿಸಿರುವ ವೆಂಕಟೇಶ್ ಪ್ರಸಾದ್ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಚೊಚ್ಚಲ ಪ್ರಾಜೆಕ್ಟ್ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿದ ವೆಂಕಟೇಶ್ ಪ್ರಸಾದ್, Chaos ನಲ್ಲಿ ಅಕ್ಷಿತ್ ಮತ್ತು ಅದಿತಿ ಪ್ರಭುದೇವ ವೈದ್ಯಕೀಯ ವಿದ್ಯಾರ್ಥಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದೊಂದು ಸಸ್ಪೆನ್ಸ್ ಆಕ್ಷನ್ ಥ್ರಿಲ್ಲರ್ ಆಗಿದ್ದು, ಕಥೆಯು ವೈದ್ಯಕೀಯ ಕ್ಯಾಂಪಸ್ ಸುತ್ತಮುತ್ತ ನಡೆಯುತ್ತದೆ. ನಾಯಕ ಮತ್ತು ಉಳಿದ ಪಾತ್ರಗಳ ಸುತ್ತ ನಡೆಯುವ ಕಥೆಯಾಗಿದೆ.
ಅಕ್ಷಿತ್ ಅವರ ತಂದೆ ಮತ್ತು ನಟ ಶಶಿಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪ-ಮಗ ಇಬ್ಬರೂ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.
Chaos ನಲ್ಲಿ ಸಿದ್ದು ಮೂಲಿಮನಿ, ಆರ್‌ಕೆ ಚಂದನ್ (ಮಂಗಳಯಂ ತಂತುನಾನೇನಾ- ಖ್ಯಾತಿ), ಶಿವಾನಂದ್ ಸಿಂದಗಿ (ಕಾಮಿಡಿ ಕಿಲಾಡಿಗಳು), ಆರಾಧನಾ ಭಟ್ (ಮಜಾ ಟಾಕೀಸ್), ಮಿಮಿಕ್ರಿ ಗೋಪಿ ಮತ್ತು ನಾಗೇಂದ್ರ ಅರಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಕ್ಟೋಬರ್‌ನಲ್ಲಿ Chaos ಸಿನಿಮಾ ಬಿಡುಗಡೆ ಮಾಡಲು ನಿರ್ದೇಶಕರು ಯೋಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


