ಸಿನಿಮಾ ಸುದ್ದಿ

ರೋಹಿತ್ ಪದಕಿ ನಿರ್ದೇಶನದ ಸಿನಿಮಾದಲ್ಲಿ ಡಾಲಿ ಧನಂಜಯ್: 'ಉತ್ತರಕಾಂಡ' ಫರ್ಸ್ಟ್ ಲುಕ್ ರಿಲೀಸ್!

ಕೆಆರ್‌ಜಿ ಸ್ಟುಡಿಯೋಸ್‌ ನಿರ್ಮಿಸಿರುವ ರೋಹಿತ್ ಪದಕಿ ನಿರ್ದೇಶನದ ಉತ್ತರಕಾಂಡದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ. ಈ ಹಿಂದೆಯೇ ಟೈಟಲ್ ರಿವೀಲ್ ಮಾಡಿದ್ದ ನಿರ್ದೇಶಕರು ಇದೀಗ ಫರ್ಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ.

ರೋಹಿತ್ ಪದಕಿ ನಿರ್ದೇಶನದ ಸಿನಿಮಾದಲ್ಲಿ ಡಾಲಿ ಧನಂಜಯ್: 'ಉತ್ತರಕಾಂಡ' ಫರ್ಸ್ಟ್ ಲುಕ್ ರಿಲೀಸ್!
ಉತ್ತರಕಾಂಡ ಸಿನಿಮಾ ಫರ್ಸ್ಟ್ ಲುಕ್
Published On :

ಕೆಆರ್‌ಜಿ ಸ್ಟುಡಿಯೋಸ್‌ ನಿರ್ಮಿಸಿರುವ ರೋಹಿತ್ ಪದಕಿ ನಿರ್ದೇಶನದ ಉತ್ತರಕಾಂಡದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ. ಈ ಹಿಂದೆಯೇ ಟೈಟಲ್ ರಿವೀಲ್ ಮಾಡಿದ್ದ ನಿರ್ದೇಶಕರು ಇದೀಗ ಫರ್ಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ.

ಡಾಲಿ ಧನಂಜಯ್‌ ಹುಟ್ಟುಹಬ್ಬಕ್ಕೆ ಮತ್ತೊಂದು ಸಿನಿಮಾ ಘೋಷಣೆ ಆಗಿದೆ.'ಕೆಜಿಎಫ್' ನಿರ್ಮಾಪಕ, ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು ಅರ್ಪಿಸಿರುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿರುವ 'ಉತ್ತರಕಾಂಡ' ಚಿತ್ರದಲ್ಲಿ ಧನಂಜಯ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ಡಾಲಿ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ರಿಲೀಸ್ ಮಾಡಿದೆ ಚಿತ್ರತಂಡ.

ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಧನಂಜಯ ಹೀರೋ ಆಗಿದ್ದ 'ರತ್ನನ್ ಪ್ರಪಂಚ' ಚಿತ್ರ ಮೂಡಿಬಂದಿತ್ತು. ಇದೇ ಬ್ಯಾನರ್‌ನಲ್ಲಿ ಈಗ 'ಹೊಯ್ಸಳ' ಚಿತ್ರ ಸಹ ಬರುತ್ತಿದ್ದು, ಮೂರನೇ ಚಿತ್ರವಾಗಿ 'ಉತ್ತರಕಾಂಡ' ನಿರ್ಮಾಣವಾಗಲಿದೆ. ಈ ಚಿತ್ರದಲ್ಲಿನ ಧನಂಜಯ್ ಅವರ ಫಸ್ಟ್ ಲುಕ್ ಭಯ ಹುಟ್ಟಿಸುವಂತಿದೆ. ಅವರ ಲುಕ್ ಇಲ್ಲಿ ಮತ್ತಷ್ಟು ರಗಡ್ ಆಗಿದೆ. 'ಉತ್ತರಕಾಂಡ' ಮೂಲಕ ಮತ್ತೊಮ್ಮೆ ಧನಂಜಯ್ ಅವರ ಜೊತೆಗೆ ರೋಹಿತ್ ಪದಕಿ ಕೈಜೋಡಿಸಿದ್ದಾರೆ.

'ಉತ್ತರ ಕಾಂಡ' ಚಿತ್ರವು ಉತ್ತರ ಕರ್ನಾಟಕದ ಗ್ಯಾಂಗ್‌ಸ್ಟರ್ ಕಥೆ ಆಧರಿಸಿದೆ.‌ ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯುತ್ತದೆ. 'ಹೊಯ್ಸಳ' ಚಿತ್ರದ ನಂತರ, ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತದೆ ಎಂದು ನಿರ್ದೇಶಕ ರೋಹಿತ್ ತಿಳಿಸಿದ್ದಾರೆ. ಈ ಸಿನಿಮಾಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ಸ್ವಾಮಿ ಛಾಯಾಗ್ರಹಣವಿದೆ. ದೀಪು ಎಸ್. ಕುಮಾರ್ ಸಂಕಲನ ಮಾಡುತ್ತಿದ್ದು, ವಿಶ್ವಾಸ್ ಅವರ ಕಲಾ ನಿರ್ದೇಶನವಿರುತ್ತದೆ.

ಚರಣ್ ರಾಜ್ “ಉತ್ತರ ಕಾಂಡ” ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.  'ದಯವಿಟ್ಟು ಗಮನಿಸಿ', 'ರತ್ನನ ಪ್ರಪಂಚ'ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ 'ಉತ್ತರಕಾಂಡ' ಚಿತ್ರ ಮೂಡಿಬರುತ್ತಿದೆ.  ಶಿವರಾಜಕುಮಾರ್ ಕೂಡ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ವದಂತಿಗಳಿವೆ, ಆದರೆ ನಿರ್ದೇಶಕರು ಈ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.