ವಿಶ್ವಾದ್ಯಂತ ‘ಲೈಗರ್’ ಮೊದಲ ದಿನ ಮಾಡಿದ ಕಲೆಕ್ಷನ್ ಎಷ್ಟು?
ವಿಜಯ್ ದೇವರಕೊಂಡ ಮತ್ತು ಅನಾನ್ಯ ಪಾಂಡೆ ಅಭಿನಯದ 'ಲೈಗರ್' ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ವಿಶ್ವಾದ್ಯಂತ ರೂ. 33.12 ಕೋಟಿ ಕಲೆಕ್ಷನ್ ಮಾಡಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಹೈದರಾಬಾದ್: ವಿಜಯ್ ದೇವರಕೊಂಡ ಮತ್ತು ಅನಾನ್ಯ ಪಾಂಡೆ ಅಭಿನಯದ 'ಲೈಗರ್' ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ವಿಶ್ವಾದ್ಯಂತ ರೂ. 33.12 ಕೋಟಿ ಕಲೆಕ್ಷನ್ ಮಾಡಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಪೂರಿ ಜಗ್ಗನಾಥ್ ನಿರ್ದೇಶನದ ಈ ಚಿತ್ರ ಹಿಂದಿ, ತೆಲುಗು, ತಮಿಳು, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಗುರುವಾರ ಬಿಡುಗಡೆಯಾಗಿದೆ. ಈ ಸಿನಿಮಾವನ್ನು ಜಗನ್ನಾಥ್ ಮತ್ತು ಚಾರ್ಮಿ ಕೌರ್ ಅವರ ಬ್ಯಾನರ್ ಪುರಿ ಕನೆಕ್ಟ್ಸ್ ಮತ್ತು ಕರಣ್ ಜೋಹರ್ ನೇತೃತ್ವದ ಧರ್ಮ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ.
ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ನಟನೆಯ ಚಿತ್ರವು ವಿಶ್ವಾದ್ಯಂತ ರೂ 33.12 ಕೋಟಿ ಸಂಗ್ರಹಿಸಿದೆ ಎಂದು ಚಿತ್ರ ನಿರ್ಮಾಪಕರು ಶುಕ್ರವಾರ ಘೋಷಿಸಿದ್ದಾರೆ.
ಚಿತ್ರದಲ್ಲಿ ರಮ್ಯಾ ಕೃಷ್ಣ, ರೋನಿತ್ ರಾಯ್ ಮತ್ತು ವಿಶು ರೆಡ್ಡಿ ಮತ್ತಿತರ ತಾರಾಬಳಗವಿದೆ. ಬಾಕ್ಸಿಂಗ್ ಐಕಾನ್ ಮೈಕ್ ಟೈಸನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ನಿರೀಕ್ಷೆ ತಲುಪವಲ್ಲಿ ಚಿತ್ರ ವಿಫಲವಾಗಿದೆ ಎಂದು ಖ್ಯಾತ ಭಾರತೀಯ ಚಿತ್ರೋದ್ಯಮ ವಿಶ್ಲೇಷಕ ತರಣ್ ಆದರ್ಶ್ ಚಿತ್ರದ ಬಗ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


