ಲೂಸಿಯಾ ಪವನ್ ಕುಮಾರ್ ನಿರ್ದೇಶನದ ಕನ್ನಡ ಸಿನಿಮಾದಲ್ಲಿ 'ಕೋಬ್ರಾ' ವಿಕ್ರಂ!
ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕೋಬ್ರಾ’ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸುತ್ತಿದೆ.

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕೋಬ್ರಾ’ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸುತ್ತಿದೆ.
ಲೂಸಿಯಾ, ಯೂಟರ್ನ್ ಸಿನಿಮಾ ಖ್ಯಾತಿಯ ಪವನ್ ಜತೆಗೆ ಸಿನಿಮಾ ಮಾಡುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಕನ್ನಡದಲ್ಲಿ ಲೂಸಿಯಾ ಪವನ್ ಹೇಳಿದ ಕಥೆ ಇಷ್ಟವಾಗಿದ್ದು ಅವರ ಜೊತೆ ಸಿನಿಮಾ ಮಾಡುತ್ತೇನೆ" ಎಂದು ತಿಳಿಸಿದರು. ಈ ಮೂಲಕ ಚಿಯಾನ್ ವಿಕ್ರಂ ಕನ್ನಡಕ್ಕೆ ಆಗಮಿಸಲಿದ್ದಾರೆ. ಬಹುಭಾಷೆಗಳಲ್ಲಿ ಮೂಡಿಬರಲಿದೆ ಈ ಸಿನಿಮಾ ಬಗ್ಗೆ ನಿರ್ಮಾಪಕರು ಶೀಘ್ರದಲ್ಲಿ ಅಧಿಕೃತ ಘೋಷಣೆ ಮಾಡಬೇಕಿದೆ.
ವಿಕ್ರಮ್ ನಟನೆಯ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ನಿರ್ಮಾಣವಾಗಲಿದೆ, ಇನ್ನೂ ಪವನ್ ಕುಮಾರ್ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಫಹದ್ ಫಾಸಿಲ್ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂಬ ವಿಷಯ ಕೇಳಿ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


