ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ
ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಚಿತ್ರಕ್ಕೆ ವಿವಿಧ ಉತ್ಸವಗಳಲ್ಲಿ ಪ್ರಶಸ್ತಿಗಳ ಸುರಿಮಳೆಯೇ ಸುರಿದಿದೆ.

ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಚಿತ್ರಕ್ಕೆ ವಿವಿಧ ಉತ್ಸವಗಳಲ್ಲಿ ಪ್ರಶಸ್ತಿಗಳ ಸುರಿಮಳೆಯೇ ಸುರಿದಿದೆ.
ರಿಷಬ್ ಶೆಟ್ಟಿ ನಿರ್ಮಾಣದ ʼಶಿವಮ್ಮʼ ಸಿನಿಮಾ ಎನ್ಎಫ್'ಡಿಸಿ ಆಯೋಜಿತ ಫಿಲಂ ಬಜಾರ್‌ನ ವರ್ಕ್ ಇನ್ ಪ್ರೋಗ್ರೆಸ್‌ನಲ್ಲಿ ಜಯಿಸಿ, ಬೂಸಾನ್ ಚಿತ್ರೋತ್ಸವದಲ್ಲಿ ಮೊದಲ ಪ್ರಶಸ್ತಿ ಮುಡಿಗೇರಿಸಿಕೊಂಡು, ಈಗ ಫ್ರಾನ್ಸ್‌ನ ನಾಂಟೆಸ್‌ನಲ್ಲಿ ನಡೆದ ಫೆಸ್ಟಿವಲ್ 3 ಕಾಂಟಿನೆಂಟ್ಸ್ ನಲ್ಲಿ 'ಯುವ ತೀರ್ಪುಗಾರರ ಅವಾರ್ಡ್' ಪಡೆದುಕೊಂಡಿದೆ.
ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ 46 ವರ್ಷದ ಶಿವಮ್ಮ ಎನ್ನುವ ಮಹಿಳೆ ತನ್ನ ಪಾರ್ಶ್ವವಾಯು ಪೀಡಿತ ಪತಿಯನ್ನು ಸಾಕಿಕೊಂಡು, ತನ್ನ ಮಕ್ಕಳ ಭವಿಷ್ಯಕ್ಕಾಗಿ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರವನ್ನು ಭರವಸೆಯಿಂದ ಪಾಲಿಸುವ ಹೋರಾಟದ ಕಥೆಯೇ ʼಶಿವಮ್ಮʼ.
ಈ ಚಿತ್ರ ಕೊಪ್ಪಳ ಜಿಲ್ಲೆಯ ಕುಕ್ನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಣವಾಗಿದ್ದು, ಸಂಪೂರ್ಣ ನಟರೆಲ್ಲ ಅದೇ ಊರಿನವರಾಗಿದ್ದು ಎಲ್ಲರೂ ಮೊದಲ ಬಾರಿ ನಟಿಸಿದ್ದಾರೆ.
ಹಲವು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿರುವ ಶಿವಮ್ಮ ಚಿತ್ರವು ಈಗಾಗಲೇ ಹಲವಾರು ಚಿತ್ರೋತ್ಸವದಲ್ಲಿ ಆಯ್ಕೆ ಆಗಿದ್ದು, ಮತ್ತಷ್ಟು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುವ ನಿರೀಕ್ಷೆ ಇದೆ.
ಯುವ ನಿರ್ದೇಶಕರುಗಳಿಗೆ ಕೈಜೋಡಿಸಿರುವ ರಿಷಬ್ ಉತ್ತಮ ಕಥೆ ಮತ್ತು ಸಾರಾಂಶ ಹೊಂದಿರುವ ಯುವ ನಿರ್ದೇಶಕರ ಸಿನಿಮಾಗಳ ನಿರ್ಮಾಣಕ್ಕೆ ʼರಿಷಬ್ ಶೆಟ್ಟಿ ಫಿಲಂಸ್ʼ ಮೂಲಕ ಸಾಥ್ ನೀಡುತ್ತಿದ್ದಾರೆ.
ʼಶಿವಮ್ಮʼ ಚಿತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಸಿನಿಮಾವನ್ನು ಜೈಶಂಕರ್ ಅರ್ಯರ ನಿರ್ದೇಶಿಸಿದ್ದಾರೆ.
ಚಿತ್ರಕ್ಕೆ ಬೂಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ನ್ಯೂ ಕರೆಂಟ್ಸ್’ ಎಂಬ ಪ್ರಶಸ್ತಿಯನ್ನು ನೀಡಲಾಗಿದೆ. ಇದು ಅತ್ಯುತ್ತಮ ಚಿತ್ರಕ್ಕೆ ನೀಡುವ ಪ್ರಶಸ್ತಿಯಾಗಿದೆ. ಒಂದು ಕಡೆ ಕಾಂತಾರ ಸೂಪರ್ ಹಿಟ್ ಆಗಿದ್ದು, ಇದೀಗ ರಿಷಬ್ ನಿರ್ಮಾಣದ ಸಿನಿಮಾಗೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಿದ್ದು ಹೆಮ್ಮೆಯ ವಿಚಾರ.
ಶಿವಮ್ಮ ಸಿನಿಮಾವನ್ನು ರಿಷಬ್ ಶೆಟ್ಟಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ರಿಷಬ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಜೈಶಂಕರ್ ಅರ್ಯರ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಶರಣಮ್ಮ ಚಟ್ಟಿ, ಚನ್ನೆಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸೌಮ್ಯನಂದ ಸಾಹಿ, ವಿಕಾಸ್ ಅರಸ್ ಛಾಯಾಗ್ರಹಣ ಮತ್ತು ಶ್ರೇಯಾಂಕ್ ನಂಜಪ್ಪ ಶಬ್ದ ವಿನ್ಯಾಸ ಚಿತ್ರಕ್ಕಿದೆ.
ಏತನ್ಮಧ್ಯೆ, ಚಿತ್ರ ನಿರ್ಮಾಣ ಸಂಸ್ಥೆಯು ಕನ್ನಡ ಕಿರುಚಿತ್ರ ದಿ ಎಕೋ ಎನ್ನುವ ಚಿತ್ರವನ್ನು ಘೋಷಿಸಿದೆ. ಈ ಚಿತ್ರವನ್ನು ಪ್ರವೀಣ್ ಶಿವಣ್ಣ ನಿರ್ದೇಶಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


