'ರಘು ತಥಾ' ದೊಂದಿಗೆ ಕಾಲಿವುಡ್ ಪ್ರವೇಶಿಸಿದ ಹೊಂಬಾಳೆ ಫಿಲಂಸ್!
ಕೆಜಿಎಫ್-2 ಮತ್ತು ಕಾಂತಾರ ಯಶಸ್ಸಿನಿಂದ ಬೀಗುತ್ತಿರುವ ಚಿತ್ರ ನಿರ್ಮಾಣ ಸಂಸ್ಥೆ ಕನ್ನಡದ ಹೊಂಬಾಳೆ ಫಿಲಂಸ್ ಇದೀಗ ಕಾಲಿವುಡ್ ಗೂ ಕಾಲಿಟ್ಟಿದೆ. ಕೀರ್ತಿ ಸುರೇಶ್ ಲೀಡ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ತಮಿಳು ಚಿತ್ರ 'ರಘು ತಥಾ' ಫೋಸ್ಟರ್ ನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಭಾನುವಾರ ಬಿಡುಗಡೆ ಮಾಡಿದೆ.

ಬೆಂಗಳೂರು: ಕೆಜಿಎಫ್-2 ಮತ್ತು ಕಾಂತಾರ ಯಶಸ್ಸಿನಿಂದ ಬೀಗುತ್ತಿರುವ ಚಿತ್ರ ನಿರ್ಮಾಣ ಸಂಸ್ಥೆ ಕನ್ನಡದ ಹೊಂಬಾಳೆ ಫಿಲಂಸ್ ಇದೀಗ ಕಾಲಿವುಡ್ ಗೂ ಕಾಲಿಟ್ಟಿದೆ. ಕೀರ್ತಿ ಸುರೇಶ್ ಲೀಡ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ತಮಿಳು ಚಿತ್ರ 'ರಘು ತಥಾ' ಫೋಸ್ಟರ್ ನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಭಾನುವಾರ ಬಿಡುಗಡೆ ಮಾಡಿದೆ.
ತನ್ನ ನೆಲದಲ್ಲೇ ಕ್ರಾಂತಿ ಆರಂಭ ಎಂಬ ಬರಹದಡಿ ಹೊಂಬಾಳೆ ಫಿಲಂಸ್ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಈ ಫೋಸ್ಟರ್ ಬಿಡುಗಡೆಯಾಗಿದೆ. ಸುಮನ್ ಕುಮಾರ್ ಚೊಚ್ಚಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕೀರ್ತಿ ಸುರೇಶ್ ಜೊತೆಗೆ ಎಂಎಸ್ ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್ ಮತ್ತಿತರರು ಅಭಿನಯಿಸುತ್ತಿದ್ದಾರೆ. ಮುಂದಿನ ವರ್ಷ ಈ ಚಿತ್ರ ತೆರೆಗೆ ಅಪ್ಪಳಿಸಲಿದೆ.

ಇದೊಂದು ಹಾಸ್ಯಮಯ ಸಿನಿಮವಾಗಿದ್ದು, ಸಮಾಜದ ವಿರುದ್ಧ ಸವಾಲೆಸುವ ಒಬ್ಬ ಗಟ್ಟಿಗಿತ್ತಿ ಯುವತಿ ಸುತ್ತ ಕಥೆ ಸಾಗುತ್ತದೆ. ತನ್ನ ಸಿದ್ಧಾಂತಗಳನ್ನು ಎತ್ತಿ ಹಿಡಿಯುವುದರ ಜೊತೆಗೆ ಸಮಾಜದ ವಿರುದ್ಧ ಹೋರಾಡುತ್ತಲೇ ಆಕೆ ಹೇಗೆ ಎಲ್ಲರಿಗೂ ಸ್ಪೂರ್ತಿಯಾಗುತ್ತಾಳೆ ಎಂಬುದು ಚಿತ್ರದ ಕಥೆಯಾಗಿದೆ. ಆ ಪಾತ್ರಕ್ಕೆ ಕೀರ್ತಿ ಸುರೇಶ್ ಅತ್ಯುತ್ತಮ ಆಯ್ಕೆಯಾಗಿದ್ದು, ಅವರೊಂದಿಗೆ ಕೆಲಸ ಮಾಡಲು ಹೊಂಬಾಳೆ ಫಿಲಂಸ್ ಹೆಮ್ಮೆ ಪಡುತ್ತದೆ ಎಂದು ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


