ಬೆಂಗಳೂರು: ಹಿರಿಯ ಹಾಸ್ಯ ನಟ ಮನದೀಪ್ ರಾಯ್‌ಗೆ ಹೃದಯಾಘಾತ
ಕನ್ನಡದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಿಗ್ಗಜ ಕಲಾವಿದರ ಜೊತೆ ನಟಿಸಿದ ಕನ್ನಡದ ಹಿರಿಯ ನಟ ಮನ್‌ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದೆ. ಕನ್ನಡದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
500 ಕ್ಕೂ ಅಧಿಕ ಸಿನಿಮಾಗಳಲ್ಲಿ ಪೋಷಕ ನಟರಾಗಿ ಮನ್‌ದೀಪ್ ರಾಯ್ ನಟಿಸಿದ್ದಾರೆ. ಆದರೆ ಈಗ ಚಿಕಿತ್ಸೆಗೆ ಹಣವಿಲ್ಲದೇ ಸಂಕಷ್ಟಕ್ಕೆ ಸಿಲುಕಿರುವುದಾಗಿ ವರದಿಯಾಗಿದೆ. ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತವಾಗಿದ್ದು, ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿರುವ ವಿಚಾರ ಚಿತ್ರೋದ್ಯಮಕ್ಕೆ ತಿಳಿಯುತ್ತಿದ್ದಂತೆಯೇ ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಹಲವರು ಹಾರೈಸಿದ್ದಾರೆ. ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಮನದೀಪ್ ರಾಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿರುವ ಮನದೀಪ್ ರಾಯ್, ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು. ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


