ಸಿನಿಮಾ ಸುದ್ದಿ

'ಕ್ಯಾಪ್ಟನ್ ಮಿಲ್ಲರ್' ಚಿತ್ರದಲ್ಲಿ ನಟ ಧನುಷ್ ಅಣ್ಣನ ಪಾತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್

ಅರುಣ್ ಮಾಥೇಶ್ವರನ್ ನಿರ್ದೇಶನದ ಧನುಷ್ ಅವರ ಮುಂಬರುವ ಚಿತ್ರ ಕ್ಯಾಪ್ಟನ್ ಮಿಲ್ಲರ್‌ನಲ್ಲಿ ಕನ್ನಡದ ನಟ ಶಿವರಾಜ್‌ಕುಮಾರ್ ಅವರು ಅಭಿನಯಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ನಿರ್ಮಾಪಕರ ಕಡೆಯಿಂದ ಅಧಿಕೃತ ದೃಢೀಕರಣವಿಲ್ಲವಾದರೂ, ಕನ್ನಡದ ಹಿರಿಯ ನಟ ಇತ್ತೀಚೆಗೆ ಚಿತ್ರದಲ್ಲಿ ತಾವು ನಟಿಸುವುದಾಗಿ ಖಚಿತಪಡಿಸಿದ್ದಾರೆ.

'ಕ್ಯಾಪ್ಟನ್ ಮಿಲ್ಲರ್' ಚಿತ್ರದಲ್ಲಿ ನಟ ಧನುಷ್ ಅಣ್ಣನ ಪಾತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್
ನಟ ಶಿವರಾಜ್‌ಕುಮಾರ್
Published On :

ಅರುಣ್ ಮಾಥೇಶ್ವರನ್ ನಿರ್ದೇಶನದ ಧನುಷ್ ಅವರ ಮುಂಬರುವ ಚಿತ್ರ ಕ್ಯಾಪ್ಟನ್ ಮಿಲ್ಲರ್‌ನಲ್ಲಿ ಕನ್ನಡದ ನಟ ಶಿವರಾಜ್‌ಕುಮಾರ್ ಅವರು ಅಭಿನಯಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ನಿರ್ಮಾಪಕರ ಕಡೆಯಿಂದ ಅಧಿಕೃತ ದೃಢೀಕರಣವಿಲ್ಲವಾದರೂ, ಕನ್ನಡದ ಹಿರಿಯ ನಟ ಇತ್ತೀಚೆಗೆ ಚಿತ್ರದಲ್ಲಿ ತಾವು ನಟಿಸುವುದಾಗಿ ಖಚಿತಪಡಿಸಿದ್ದಾರೆ.

ಇತ್ತೀಚಿನ ಮಾಧ್ಯಮ ಸಂವಾದದ ಸಂದರ್ಭದಲ್ಲಿ ಶಿವರಾಜಕುಮಾರ್ ಅವರು, ಚಿತ್ರದಲ್ಲಿ ತಾನು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ನಟ ಧನುಷ್ ಅವರ ಅಣ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದಾಗಿ ಹೇಳಿದರು.

<strong>ಧನುಷ, ಶಿವರಾಜಕುಮಾರ್</strong>
ಧನುಷ, ಶಿವರಾಜಕುಮಾರ್

ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ಸತ್ಯಜ್ಯೋತಿ ಫಿಲ್ಮ್ಸ್‌ ಬಂಡವಾಳ ಹೂಡಿದ್ದು, ಸಂದೀಪ್ ಕಿಶನ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ಕೂಡ ಇದ್ದಾರೆ.

ಕ್ಯಾಪ್ಟನ್ ಮಿಲ್ಲರ್ ಸ್ವಾತಂತ್ರ್ಯ ಪೂರ್ವದ ಕಥೆಯಾಗಿದ್ದು, ಶ್ರೇಯಸ್ ಕೃಷ್ಣ ಅವರ ಛಾಯಾಗ್ರಹಣವಿದ್ದು, ಜಿವಿ ಪ್ರಕಾಶ್ ಕುಮಾರ್ ಅವರು ಸಂಗೀತ ಸಂಯೋಜಿಸಿದ್ದಾರೆ ಮತ್ತು ನಾಗೂರನ್ ಸಂಕಲನದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

ವಿಶೇಷ ಎಂದರೆ, ರಜನಿಕಾಂತ್-ನೆಲ್ಸನ್ ಅವರ ಮುಂಬರುವ ಚಿತ್ರ ಜೈಲರ್‌ನಲ್ಲಿ ಕೂಡ ಶಿವರಾಜ್‌ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.