ರಾಜ್ ಬಿ ಶೆಟ್ಟಿ 'ಸ್ವಾತಿಮುತ್ತಿನ ಮಳೆ ಹನಿಯೇ' ಚಿತ್ರದ ಹಿರೋಯಿನ್ ಇವರೇ..!!
ನಟಿ ರಮ್ಯ ಅವರ ಮೂಲಕ ತೆರವಾಗಿದ್ದ ರಾಜ್ ಬಿ ಶೆಟ್ಟಿ ನಿರ್ದೇಶನದ 'ಸ್ವಾತಿಮುತ್ತಿನ ಮಳೆ ಹನಿಯೇ' ಚಿತ್ರದ ನಾಯಕನಟಿ ಘೋಷಣೆ ಮಾಡಲಾಗಿದೆ.

ಬೆಂಗಳೂರು: ನಟಿ ರಮ್ಯ ಅವರ ಮೂಲಕ ತೆರವಾಗಿದ್ದ ರಾಜ್ ಬಿ ಶೆಟ್ಟಿ ನಿರ್ದೇಶನದ 'ಸ್ವಾತಿಮುತ್ತಿನ ಮಳೆ ಹನಿಯೇ' ಚಿತ್ರದ ನಾಯಕನಟಿ ಘೋಷಣೆ ಮಾಡಲಾಗಿದೆ.
ಹೌದು.. ರಾಜ್ ಬಿ.ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಹೊಸ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರೀಕರಣ ಇತ್ತೀಚೆಗಷ್ಟೇ ಪೂರ್ಣಗೊಂಡಿತ್ತು. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತಲ್ಲೀನವಾಗಿರುವ ಚಿತ್ರತಂಡವು ನಾಯಕಿ ಪಾತ್ರದ ಪರಿಚಯ ಮಾಡಿದೆ. ನಟಿ ರಮ್ಯ ಅವರಿಂದ ತೆರವಾದ ಸ್ಥಾನಕ್ಕೆ ಸಿರಿ ರವಿಕುಮಾರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಚಿತ್ರದಲ್ಲಿ ಅವರು ಪ್ರೇರಣಾ ಎಂಬ ಪಾತ್ರದಲ್ಲಿ ಮಿಂಚಲಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ‘ಪ್ರೇರಣಾ’ಳನ್ನು ಪರಿಚಯಿಸಿದ್ದು, ‘ನೀವು ಎಷ್ಟು ಅದ್ಭುತವಾದ ನಟಿ ಎನ್ನುವುದನ್ನು ಪ್ರೇಕ್ಷಕರಿಗೆ ತೋರಿಸಲು ಕಾತುರದಿಂದಿದ್ದೇವೆ’ ಎಂದಿದ್ದಾರೆ. ‘ಸಕುಟುಂಬ ಸಮೇತ’, ‘ಆಬ್ರಕಡಾಬ್ರ’ ಸಿನಿಮಾದಲ್ಲಿ ನಟಿಸಿದ್ದ ಸಿರಿ ರವಿಕುಮಾರ್, ಸದ್ಯ ಅಭಿಜಿತ್ ಮಹೇಶ್ ನಿರ್ದೇಶನದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲೂ ಬಣ್ಣಹಚ್ಚಿದ್ದಾರೆ. ದಿಗಂತ್ ಮಂಚಾಲೆ, ರಿಷಬ್ ಶೆಟ್ಟಿ, ಅಚ್ಯುತಕುಮಾರ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.
ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾವನ್ನು ನಿರ್ಮಾಣ ಮಾಡಿದೆ. ರಮ್ಯಾ ಅವರು ಈ ಪಾತ್ರದಲ್ಲಿ ನಟಿಸಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅವರು ಹಿಂದೆ ಸರಿದಿದ್ದರು. ‘ಹೊಸ ಮುಖವೊಂದು ಈ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಲಿದೆ’ ಎನ್ನುವ ಕಾರಣ ನೀಡಿ ಈ ಸಿನಿಮಾದಿಂದ ರಮ್ಯಾ ಹೊರಬಂದಿದ್ದರು. ನಂತರದಲ್ಲಿ ಚಿತ್ರದ ನಾಯಕಿಯಾಗಿ ನಟಿ ಸಿರಿ ರವಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


