ಹಿರಿಯ ನಟ, ‘ಕೆಜಿಎಫ್’ ಖ್ಯಾತಿಯ ತಾತ ಕೃಷ್ಣ ರಾವ್ ನಿಧನ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಕೃಷ್ಣ ರಾವ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಕೃಷ್ಣ ರಾವ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಯಲ್ಲಿ ಕೃಷ್ಣ ರಾವ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ನಾಳೆ ಬೆಳಗ್ಗೆ 11:00 ಘಂಟೆಗೆ ಸೀತಾ ಸರ್ಕಲ್ನಲ್ಲಿರುವ ಕೃಷ್ಣ ಅವರ ಅಣ್ಣನ ಮನೆ ಬಳಿಯ ಸ್ಮಶಾನದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.
ಕೃಷ್ಣ ರಾಮ್ ಅವರು ನಟ ಶಂಕರ್ ನಾಗ್ ಕಾಲದಿಂದಲೂ ಕನ್ನಡ ಚಿತ್ರರಂಗದಲ್ಲಿದ್ದರು. ಆದರೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಹಾಗೂ 'ಕೆಜಿಎಫ್ 2' ಸಿನಿಮಾಗಳಲ್ಲಿ ನಟಿಸಿದ ನಂತರ ಕೃಷ್ಣ ರಾವ್ ಅವರು ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದರು.
ಕೆಜಿಎಫ್ 2 ಚಿತ್ರದಲ್ಲಿನ ಅವರ ಡೈಲಾಗ್ಗೆ ಫ್ಯಾನ್ಸ್ ಫಿದಾ ಆಗಿದ್ದರು. ಚಿತ್ರದಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಳ್ಳದಿದ್ದರು ಅವರ ಪಾತ್ರ ಮತ್ತು ಡೈಲಾಗ್ನಿಂದ ಫ್ಯಾನ್ಸ್ಗಳಿಗೆ ಇಷ್ಟವಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


