ಕಾಂತಾರ ಸಿನಿಮಾ ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ: ರಿಷಬ್ ಶೆಟ್ಟಿ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ
ಬಾಲಿವುಡ್ನ ಖ್ಯಾತ ನಟ ಹೃತಿಕ್ ರೋಷನ್ ಅವರು ಕೂಡ ‘ಕಾಂತಾರ’ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್ ಸಖತ್ ಇಷ್ಟ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ದೇಶಾದ್ಯಂತ ಹೊಸ ಸಂಚಲನ ಮೂಡಿಸಿದ ‘ಕಾಂತಾರ’ ಚಿತ್ರದ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಭಾಷೆಗಳ ಗಡಿ ಮೀರಿ ಈ ಚಿತ್ರ ಯಶಸ್ಸು ಕಂಡಿದೆ. ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನಕ್ಕೆ ಸಿನಿಪ್ರಿಯರು ಫಿದಾ ಆಗಿದ್ದಾರೆ.
ಬಾಲಿವುಡ್ನ ಖ್ಯಾತ ನಟ ಹೃತಿಕ್ ರೋಷನ್ ಅವರು ಕೂಡ ‘ಕಾಂತಾರ’ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್ ಸಖತ್ ಇಷ್ಟ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಕಾಂತಾರ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್ನಲ್ಲಿ ಕಂಡ ಬದಲಾವನಣೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್ ರೋಷನ್ ಪೋಸ್ಟ್ ಮಾಡಿದ್ದಾರೆ.
ಕನ್ನಡ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ‘ಕಾಂತಾರ’ ಚಿತ್ರದಿಂದ ಚಂದನವನದ ಚಾರ್ಮ್ ಹೆಚ್ಚಿದೆ. ರಜನಿಕಾಂತ್, ವಿವೇಕ್ ಅಗ್ನಿಹೋತ್ರಿ, ಕಂಗನಾ ರಣಾವತ್, ಅನುಷ್ಕಾ ಶೆಟ್ಟಿ, ಪ್ರಭಾಸ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಸಿನಿಮಾವನ್ನು ಕೊಂಡಾಡಿದ್ದಾರೆ. ಅವರ ಸಾಲಿಗೆ ಹೃತಿಕ್ ರೋಷನ್ ಕೂಡ ಸೇರ್ಪಡೆ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


