'ಗುಲ್ಟೂ' ಶಂಕರ್ ಮುಂದಿನ ಸಿನಿಮಾ 'ಮೂಲತಃ ನಮ್ಮವರೇ'!
ಚೊಚ್ಚಲ ಸಿನಿಮಾ ಗುಲ್ಟೂ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ನವೀನ್ ಶಂಕರ್ ಧರಣಿ ಮಂಡಲ ಮಧ್ಯದೊಳಗೆ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಮೂಲತಃ ನಮ್ಮವರೇ ಎಂಬ ಟೈಟಲ್ ನ ಚಿತ್ರೀಕರಣ ಮುಗಿಸಿದ್ದಾರೆ.

ಚೊಚ್ಚಲ ಸಿನಿಮಾ ಗುಲ್ಟೂ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ನವೀನ್ ಶಂಕರ್ ಧರಣಿ ಮಂಡಲ ಮಧ್ಯದೊಳಗೆ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಮೂಲತಃ ನಮ್ಮವರೇ ಎಂಬ ಟೈಟಲ್ ನ ಚಿತ್ರೀಕರಣ ಮುಗಿಸಿದ್ದಾರೆ.
ರಂಗಭೂಮಿ ನಂಟಿರುವ ಚೇತನ್ ಭಾಸ್ಕರಯ್ಯ 'ಮೂಲತಃ ನಮ್ಮವರೇ' ಸಿನಿಮಾದ ಮೂಲಕ ನಿರ್ದೇಶಕರಾಗಿದ್ದಾರೆ. 'ನನಗೆ ಸಿನಿಮಾ ನಿರ್ದೇಶನದಲ್ಲಿ ತುಂಬ ಆಸಕ್ತಿ ಇತ್ತು. ಈ ಹಿಂದೆ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಹಿರಿತೆರೆಯಲ್ಲಿ ಇದು ನನಗೆ ಮೊದಲ ಚಿತ್ರ.
'ಮೂಲತ: ನಮ್ಮವರೇ' ಇದೊಂದು ಕೌಟುಂಬಿಕ ಚಿತ್ರ. ಅಪ್ಪ- ಮಗನ ಬಾಂಧವ್ಯದ ಸನ್ನಿವೇಶಗಳೇ ಈ ಚಿತ್ರದ ಹೈಲೆಟ್ . ಬೆಂಗಳೂರು ಹಾಗೂ ಕರಾವಳಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ. ನವೀನ್ ಶಂಕರ್ ಬಿಟ್ಟರೆ ಬಹುತೇಕರಿಗೆ ಇದು ಮೊದಲ ಸಿನಿಮಾ' ಎಂದರು ನಿರ್ದೇಶಕ ಚೇತನ್ ಭಾಸ್ಕರಯ್ಯ.
ಅಂದಹಾಗೆ, ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಮುಂಬೈನ ತಾನ್ಯಾ ಈ ಚಿತ್ರದ ನಾಯಕಿ. ಅವಿನಾಶ್, ಮಾಳವಿಕಾ ಅವಿನಾಶ್, ತೆಲುಗಿನ ಸತ್ಯಪ್ರಕಾಶ್, ಕಾವ್ಯಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
'ಮೂಲತಹ ನಮ್ಮವರೇ' ಮ್ಯೂಸಿಕ್ ಬ್ಯಾಂಡ್ ಏಕ್ ಕ್ಯಾಬ್ ಸಂಗೀತ ನೀಡಲಿದ್ದು, ಜುವೀನ್ ಸಿಂಗ್ ಹಿನ್ನೆಲೆ ಸಂಗೀತದ ಹೊಣೆ ಹೊತ್ತಿದ್ದಾರೆ. ಚಿತ್ರಕ್ಕೆ ಚಂತು ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


