ತೆಲಗಿ ವೆಬ್ ಸೀರಿಸ್ ಬಿಡುಗಡೆಗೆ ತಡೆ ನೀಡಲು ಮುಂಬೈ ಕೋರ್ಟ್ ನಕಾರ!
ನಕಲಿ ಸ್ಟಾಂಪ್ ಪೇಪರ್ ಹಗರಣದ ಆರೋಪಿ ಮೃತ ಅಬ್ದುಲ್ ಕರೀಂ ತೆಲಗಿ ಜೀವನಾಧಾರಿತ ವೆಬ್ ಸರಣಿ ಬಿಡುಗಡೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಮನವಿಯನ್ನು ಇಲ್ಲಿನ ಸಿವಿಲ್ ಕೋರ್ಟ್ ವಜಾಗೊಳಿಸಿದೆ.

ಮುಂಬೈ: ನಕಲಿ ಸ್ಟಾಂಪ್ ಪೇಪರ್ ಹಗರಣದ ಆರೋಪಿ ಮೃತ ಅಬ್ದುಲ್ ಕರೀಂ ತೆಲಗಿ ಜೀವನಾಧಾರಿತ ವೆಬ್ ಸರಣಿ ಬಿಡುಗಡೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಮನವಿಯನ್ನು ಇಲ್ಲಿನ ಸಿವಿಲ್ ಕೋರ್ಟ್ ವಜಾಗೊಳಿಸಿದೆ.
ತೆಲಗಿ ಅವರ ಪುತ್ರಿ ಸನಾ ಇರ್ಫಾನ್ ತಾಳಿಕೋಟಿ 'ಸ್ಕ್ಯಾಮ್ 2003-ದಿ ಕ್ಯೂರಿಯಸ್ ಕೇಸ್ ಆಫ್ ಅಬ್ದುಲ್ ಕರೀಂ ಲಾಲಾ ತೆಲಗಿ' ವೆಬ್ ಸರಣಿಯ ತಯಾರಕರ ವಿರುದ್ಧ ಸಿಟಿ ಸಿವಿಲ್ ನ್ಯಾಯಾಲಯದ ಮೆಟ್ಟಿಲೇರಿದ್ದರು.
ವೆಬ್ ಸೀರಿಸ್ ನಿರ್ಮಾಣಕ್ಕೂ ಮೊದಲು ನಿರ್ಮಾಪಕರು ಕುಟುಂಬದ ಒಪ್ಪಿಗೆಯನ್ನು ತೆಗೆದುಕೊಂಡಿಲ್ಲ. ಹೀಗಾಗಿ ವೆಬ್ ಸರಣಿ ಬಿಡುಗಡೆಗೆ ತಡೆ ನೀಡುವಂತೆ ಕೋರಿದ್ದರು. ಆದರೆ ಮಧ್ಯಂತರ ತೀರ್ಪು ನೀಡಲು ನ್ಯಾಯಾಲಯ ತಿರಸ್ಕರಿಸಿದೆ ಎಂದು ಸನಾ ಪರ ವಕೀಲರು ಹೇಳಿದ್ದಾರೆ.
ವೆಬ್ ಸರಣಿಯು ತಮ್ಮ ಕುಟುಂಬದ ಖಾಸಗಿತನ, ಘನತೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.
2004ರ ಬಹುಕೋಟಿ ನಕಲಿ ಸ್ಟಾಂಪ್ ಪೇಪರ್ ಹಗರಣಕ್ಕೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳಲ್ಲಿ ದೋಷಿಯಾಗಿದ್ದ ಅಲ್ಲದೆ ಒಟ್ಟು 30 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ತೆಲಗಿ 2017ರ ಅಕ್ಟೋಬರ್ ನಲ್ಲಿ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


