ಟಾಲಿವುಡ್ ಹಿರಿಯ ನಟ ಚಲಪತಿ ರಾವ್ ವಿಧಿವಶ
ತೆಲುಗು ಚಿತ್ರರಂಗದ ಹಿರಿಯ ನಟ ಚಲಪತಿ ರಾವ್ (78) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ,

ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಯ ನಟ ಚಲಪತಿ ರಾವ್ (78) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ,
ಹೃದಯಾಘಾತದಿಂದ ಬಂಜಾರ ಹಿಲ್ಸ್, ಎಂಎಲ್ಎ ಕಾಲೋನಿಯಲ್ಲಿರುವ ತಮ್ಮ ಪುತ್ರ ರವಿಬಾಬು ಅವರ ನಿವಾಸದಲ್ಲಿ ಚಲಪತಿ ರಾವ್ ಅವರು ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.
ಚಲಪತಿ ರಾವ್ ಅವರ ಮಗ ರವಿಬಾಬು ಕೂಡ ತೆಲುಗು ಚಿತ್ರರಂಗದಲ್ಲಿ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದಾರೆ.
ಪೋಷಕ ನಟ ಮತ್ತು ಖಳನಟ ಪಾತ್ರಗಳಿಗೆ ಹೆಸರಾದ ಚಲಪತಿ ರಾವ್ ಅವರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.
ತೆಲುಗು ಸ್ಟಾರ್ ನಟರಾದ ಎನ್‌ಟಿ ರಾಮರಾವ್, ಕೃಷ್ಣ, ಚಿರಂಜೀವಿ, ನಂದಮುರಿ ಬಾಲಕೃಷ್ಣ, ಪವನ್ ಕಲ್ಯಾಣ್, ವೆಂಕಟೇಶ್, ಅಕ್ಕಿನೇನಿ ನಾಗಾರ್ಜುನ, ಜ್ಯೂ. ಎನ್‌ಟಿಆರ್, ಮಹೇಶ್ ಬಾಬು ಅಭಿನಯಿಸಿದ್ದ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಚಲಪತಿ ರಾವ್ ಕಾಣಿಸಿಕೊಂಡಿದ್ದರು.
ಚಲಪತಿ ರಾವ್ ಅವರ ನಿಧನಕ್ಕೆ ರಾಜಕೀಯ ಮುಖಂಡರು ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


