ಸಿನಿಮಾ ಸುದ್ದಿ

ಪ್ರಭುದೇವ ನಟನೆಯ 'ವುಲ್ಫ್' ಸಿನಿಮಾ ಶೂಟಿಂಗ್ ಮುಕ್ತಾಯ

ಕೆಲವು ತಿಂಗಳುಗಳ ಹಿಂದೆಯೇ ಪ್ರಭುದೇವ ಅಭಿನಯದ ಪ್ಯಾನ್​ ಇಂಡಿಯಾ ಚಿತ್ರವೊಂದನ್ನು ತಮ್ಮ ಸಂದೇಶ್​ ಪ್ರೊಡಕ್ಷನ್ಸ್​ ಮೂಲಕ ಶುರು ಮಾಡಿದ್ದರು ಹಿರಿಯ ನಿರ್ಮಾಪಕ ಸಂದೇಶ್​ ನಾಗರಾಜ್​. ಈ ಚಿತ್ರಕ್ಕೆ ‘ವುಲ್ಫ್​’ ಎಂಬ ಹೆಸರನ್ನು ಇಡಲಾಗಿತ್ತು.

ಪ್ರಭುದೇವ ನಟನೆಯ 'ವುಲ್ಫ್' ಸಿನಿಮಾ ಶೂಟಿಂಗ್ ಮುಕ್ತಾಯ
ವುಲ್ಫ್' ಸಿನಿಮಾ ಶೂಟಿಂಗ್ ಮುಕ್ತಾಯ
Published On :

ಕೆಲವು ತಿಂಗಳುಗಳ ಹಿಂದೆಯೇ ಪ್ರಭುದೇವ ಅಭಿನಯದ ಪ್ಯಾನ್​ ಇಂಡಿಯಾ ಚಿತ್ರವೊಂದನ್ನು ತಮ್ಮ ಸಂದೇಶ್​ ಪ್ರೊಡಕ್ಷನ್ಸ್​ ಮೂಲಕ ಶುರು ಮಾಡಿದ್ದರು ಹಿರಿಯ ನಿರ್ಮಾಪಕ ಸಂದೇಶ್​ ನಾಗರಾಜ್​. ಈ ಚಿತ್ರಕ್ಕೆ ‘ವುಲ್ಫ್​’  ಎಂಬ ಹೆಸರನ್ನು ಇಡಲಾಗಿತ್ತು.  ಇದೀಗ ಈ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ.

ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ ಭಾರದ್ವಾಜ್​ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪಾಂಡಿಚೇರಿ, ಚೆನೈ, ಬೆಂಗಳೂರು, ಅಂಡಮಾನ್, ನಿಕೋಬಾರ್ ಮುಂತಾದ ಕಡೆ 65 ದಿನಗಳ ಚಿತ್ರೀಕರಣ ಮಾಡಲಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ‘ಚಿತ್ರವು ಮುಂದಿನ ವರ್ಷ ತೆರೆಗೆ ಬರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.