ಸಿನಿಮಾ ಸುದ್ದಿ

ಸಮನ್ವಿ ಕುಟುಂಬದಲ್ಲಿ ಸಂತಸ: ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು 

'ನಮ್ಮ ಕಷ್ಟದ ಸಮಯದಲ್ಲಿ ನಮ್ಮೊಂದಿಗೆ ಇರುವುದಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಈಗ ನಮ್ಮ ಜೀವನವು ಹೊಸ ಛಾಯೆಯೊಂದಿಗೆ ಹೊಸದಾಗಿ ಆರಂಭವಾಗಿದೆ.

ಸಮನ್ವಿ ಕುಟುಂಬದಲ್ಲಿ ಸಂತಸ: ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಅಮೃತಾ ನಾಯ್ಡು 
ಸಮನ್ವಿ ಮತ್ತು ಅಮೃತಾ
Published On :

ಕಿರುತೆರೆ ನಟಿ ಅಮೃತಾ ರೂಪೇಶ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಸಾಕಷ್ಟು ಏರುಪೇರುಗಳನ್ನು ಅನುಭವಿಸಿದ್ದ ಅಮೃತಾಗೆ ಈಗ ಮಗನ ಆಗಮನದಿಂದ ಸಂತಸ ಉಂಟಾಗಿದೆ. 

ತಮಗೆ ಗಂಡು ಮಗು ಜನಿಸಿರುವ ಬಗ್ಗೆ ಅಮೃತಾ ಮತ್ತು ರೂಪೇಶ್ ಮಾಹಿತಿ ಹಂಚಿಕೊಂಡಿದ್ದಾರೆ.

ತಮಗೆ ಗಂಡು ಮಗು ಜನಿಸಿದ ಹಿನ್ನೆಲೆಯಲ್ಲಿ ಅಮೃತಾ ಮತ್ತು ರೂಪೇಶ್ ದಂಪತಿ ಧನ್ಯವಾದಗಳನ್ನು ತಿಳಿಸಿದ್ದಾರೆ. 'ನಮ್ಮ ಕಷ್ಟದ ಸಮಯದಲ್ಲಿ ನಮ್ಮೊಂದಿಗೆ ಇರುವುದಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಈಗ ನಮ್ಮ ಜೀವನವು ಹೊಸ ಛಾಯೆಯೊಂದಿಗೆ ಹೊಸದಾಗಿ ಆರಂಭವಾಗಿದೆ. 

ನಿಮ್ಮೆಲ್ಲರ ನಿರಂತರ ಆಶೀರ್ವಾದ ಮತ್ತು ಹಾರೈಕೆಗಳೊಂದಿಗೆ ನಮಗೆ ಗಂಡು ಮಗು ಜನಿಸಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ' ಎಂದು ಅಮೃತಾ ತಿಳಿಸಿದ್ದಾರೆ. ಕಳೆದ ಜನವರಿ 13ರಂದು ಅಮೃತಾ ಅವರ ಪುತ್ರಿ ಸಮನ್ವಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಳು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.