ಸಿನಿಮಾ ಸುದ್ದಿ

'ಹೊಯ್ಸಳ' ಚಿತ್ರದಲ್ಲಿ 'ಗುರು ದೇವ್' ಪೋಲೀಸ್ ಪಾತ್ರದಲ್ಲಿ ಡಾಲಿ ಧನಂಜಯ್!

ಡಾಲಿ ಧನಂಜಯ ನಟಿಸುತ್ತಿರುವ ‘ಹೊಯ್ಸಳ’ ಸಿನಿಮಾದ ಚಿತ್ರೀಕರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ. ಡಾಲಿ ಧನಂಜಯ ಈ ಚಿತ್ರದಲ್ಲಿ ಗುರು ದೇವ್ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

'ಹೊಯ್ಸಳ' ಚಿತ್ರದಲ್ಲಿ 'ಗುರು ದೇವ್' ಪೋಲೀಸ್ ಪಾತ್ರದಲ್ಲಿ ಡಾಲಿ ಧನಂಜಯ್!
ಧನಂಜಯ್
Published On :

ಡಾಲಿ ಧನಂಜಯ ನಟಿಸುತ್ತಿರುವ ‘ಹೊಯ್ಸಳ’ ಸಿನಿಮಾದ ಚಿತ್ರೀಕರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿದೆ.  ಡಾಲಿ ಧನಂಜಯ ಈ ಚಿತ್ರದಲ್ಲಿ ಗುರು ದೇವ್ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ವಿಜಯ್ ನಾಗೇಂದ್ರ “ಹೊಯ್ಸಳ” ಚಿತ್ರದ ನಿರ್ದೇಶಕರು. ಈ ಹಿಂದೆ ಗಣೇಶ್ ಅಭಿನಯದ “ಗೀತಾ” ಚಿತ್ರವನ್ನು ವಿಜಯ್ ನಾಗೇಂದ್ರ ನಿರ್ದೇಶನ ಮಾಡಿದ್ದರು. ಅಜನೀಶ್ ಲೋಕನಾಥ್ ಆವರ  ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಇತ್ತೀಚೆಗೆ ನಾಯಕ ಧನಂಜಯ ಅವರ “ಹೊಯ್ಸಳ” ಚಿತ್ರದ ಫಸ್ಟ್ ಲುಕ್ ಸಹ ನಿರ್ಮಾಣ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್ ನಿಂದ ಬಿಡುಗಡೆಯಾಗಿದೆ.

ಮೈಸೂರಿನ ಭಾಗದ ಚಿತ್ರೀಕರಣದಲ್ಲಿ ನಾಯಕ ಧನಂಜಯ, ನಾಯಕಿ ಅಮೃತ ಅಯ್ಯಂಗಾರ್, ಅಚ್ಯುತ್ ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದ ಕಲಾವಿದರು ಭಾಗಿಯಾಗಿದ್ದಾರೆ. ಸಾಹಸ ನಿರ್ದೇಶಕರಾದ ದಿಲೀಪ್ ಸುಬ್ರಹ್ಮಣ್ಯ ಹಾಗೂ ಅರ್ಜುನ್ ಮಾಸ್ಟರ್ ಅವರ ಸಾಹಸ ಸಂಯೋಜನೆಯಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆಯಲಿದೆ.

ಹೊಯ್ಸಳ' ಚಿತ್ರವನ್ನು ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.