ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ವಿದೇಶದಲ್ಲಿಯೇ 1,200 ಸ್ಕ್ರೀನ್ ಗಳ ಗುರಿ!
ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ 3 ಡಿಯಲ್ಲಿ ಜುಲೈ 28 ರಂದು ಬಿಡುಗಡೆಗೆ ಸಜ್ಜಾಗಿದೆ. ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ಕುತೂಹಲ ಮೂಡಿಸಿದೆ.

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ 3 ಡಿಯಲ್ಲಿ ಜುಲೈ 28 ರಂದು ಬಿಡುಗಡೆಗೆ ಸಜ್ಜಾಗಿದೆ. ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ಕುತೂಹಲ ಮೂಡಿಸಿದೆ. ಅನೂಪ್ ಭಂಡಾರಿ ನಿರ್ದೇಶನದ ಬಹು ಭಾಷೆಯ ಸಿನಿಮಾ, ದೇಶದಲ್ಲಿ ಹೆಚ್ಚಿನ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರಗಳಲ್ಲಿ ಒಂದಾಗಿದೆ. ಅದೇ ರೀತಿಯಲ್ಲಿ ವಿದೇಶದಲ್ಲೂ ಹೆಚ್ಚಿನ ಸ್ಕ್ರೀನ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
ಶಾಲಿನಿ ಆರ್ಟ್ಸ್ ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್ ಪಾಂಡಿಯನ್ ಸಹ- ನಿರ್ಮಾಪಕರಾಗಿದ್ದಾರೆ. ಈ ಮಧ್ಯೆ, ಒನ್ ಟ್ವೆಂಟ್ -8 ಮೀಡಿಯಾ ಆಪರೇಷನ್ ಹೆಡ್ ಯೋಗಿಶ್ ದ್ವಾರಕೇಶ್, ಆಕಾಶ್ ಅಮೇಯ ಜೈನ್ ಮತ್ತು ಫಣೀಂದ್ರ ಕುಮಾರ್ ಜೊತೆಗೆ ಕಾಸ್ಮಾಸ್ ಎಂಟರ್ ಟೈನ್ ಮೆಂಟ್ ಚಿತ್ರದ ಓವರ್ ಸೀಸ್ ಮಾರ್ಕೆಟ್ ನೋಡಿಕೊಳ್ಳಲಿದೆ. ವಿದೇಶದಲ್ಲಿ 30ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ, ಸುಮಾರು 1,200 ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಬಿಡುಗಡೆಗೆ ಪ್ಲಾನ್ ಮಾಡಲಾಗಿದೆ ಎಂದು ಯೋಗಿ ಸಿನಿ ಎಕ್ಸ್ ಪ್ರೆಸ್ ಗೆ ತಿಳಿಸಿದರು.
ವಿದೇಶದಲ್ಲಿ ವಿಕ್ರಾಂತ್ ರೋಣ ಬಿಡುಗಡೆ ಮಾಡಲು ಕಳೆದ ಮೂರು ತಿಂಗಳುಗಳಿಂದ ಕೆಲಸ ಮಾಡುತ್ತಿದ್ದೇವೆ. ಯುಕೆ, ಯುಎಸ್, ಕೆನಡಾ, ಯುರೋಪ್, ಗಲ್ಫ್ ರಾಷ್ಟ್ರಗಳು, ಆಸ್ಟ್ರೇಲಿಯಾ, ಮಲೇಷಿಯಾ, ಸಿಂಗಾಪುರ, ನೇಪಾಳ ಸೇರಿದಂತೆ ಮತ್ತಿತರ ರಾಷ್ಟ್ರಗಳ ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆ ಈಗಾಗಲೇ ಖಚಿತವಾಗಿದೆ. ಸೆನ್ಸಾರ್ ಬೋರ್ಡ್ ನಿಂದ ಅನುಮತಿ ಸಿಕ್ಕ ನಂತರ ಚಿತ್ರ ಬಿಡುಗಡೆಯಾಗಲಿರುವ ರಾಷ್ಟ್ರಗಳು ಹಾಗೂ ಥಿಯೇಟರ್ ಗಳ ಬಗ್ಗೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.

ಕನ್ನಡ, ಹಿಂದಿ, ಇಂಗ್ಲೀಷ್, ಮಲಯಾಳಂ ಮತ್ತು ತಮಿಳಿನಲ್ಲಿ ವಿಕ್ರಾಂತ್ ರೋಣ ಬಿಡುಗಡೆಯಾಗಲಿದೆ. ಅರಬಿಕ್, ಜರ್ಮನಿ, ರಷ್ಯಾ, ಮ್ಯಾಂಡರಿನ್ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯೂ ಇದೆ. ಭಾರತೀಯ ಎಲ್ಲಾ ಭಾಷೆಗಳಲ್ಲಿ ವಿಕ್ರಾಂತ್ ರೋಣ ಬಿಡುಗಡೆ ಮಾಡುವ ಪ್ಲಾನ್ ಇದೆ. ಕನ್ನಡ ಆವೃತ್ತಿಗೆ ಆದ್ಯತೆ ನೀಡಲಾಗುವುದು, ಪ್ರದರ್ಶನಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಯೋಗಿ ಮಾಹಿತಿ ನೀಡಿದರು.
ವಿದೇಶಗಳಲ್ಲಿ ಪ್ರತಿಕ್ರಿಯೆ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಲಾಗುವುದು, ಎರಡು ವಾರಗಳ ನಂತರ ಮ್ಯಾಂಡರಿನ್ ಭಾಷೆಯಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಯೋಗೀಶ್ ತಿಳಿಸಿದರು. ಸುದೀಪ್ ಅವರೊಂದಿಗೆ ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ, ನೀತಾ ಅಶೋಕ್ ಮತ್ತಿತರರು ವಿಕ್ರಾಂತ್ ರೋಣ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಈ ಮಧ್ಯೆ, ಮುಂದಿನ ಲಿರಿಕಲ್ ವಿಡಿಯೋ ಸಾಂಗ್.. ಹೈ ಫಕೀರಾ ನಾಳೆ ಬಿಡುಗಡೆಯಾಗಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದ ಈ ಸಾಂಗ್ ಗೆ ಅನೂಪ್ ಭಂಡಾರಿ ಅವರ ಸಾಹಿತ್ಯವಿದೆ. ವಿಲ್ಲಿಯಂ ಡೇವಿಡ್ ಅವರ ಛಾಯಾಗ್ರಾಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


